ಹನೂರು:ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸುವಂತೆ ಚಿಂಚಳ್ಳಿ ಗ್ರಾಮದ ಗ್ರಾಮಸ್ಥರು ಮನವಿ ಸಲ್ಲಿಸಿದರು ಸಹ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರು ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ಹನೂರು ತಾಲೂಕಿನ ಚಿಂಚಳ್ಳಿ ಗ್ರಾಮವೂ ತಾಲ್ಲೂಕು ಕೇಂದ್ರ ದಿಂದ 5.5 ಕಿಲೋಮೀಟರ್ ಇದ್ದರೂ ಸಹ ಸಮರ್ಪಕವಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ವ್ಯವಸ್ಥೆ ಇಲ್ಲದ ಪರಿಣಾಮ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಹರ ಸಾಹಸ ಪಡಬೇಕಾದ ಪರಿಸ್ಥಿತಿ ಉಂಟಾಗಿದೆ, ಸುಮಾರು 200 ಮಕ್ಕಳು ತಾಲ್ಲೂಕು ಕೇಂದ್ರವಾದ ಹನೂರು ಹಾಗೂ ಕೊಳ್ಳೇಗಾಲಕ್ಕೆ ವಿದ್ಯಾಭ್ಯಾಸಕ್ಕೆ ಎಂದು ಹೋಗುತ್ತಿದ್ದಾರೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ವಿಲ್ಲದ ಪರಿಣಾಮ ಶಾಲೆಗಳಿಗೆ ತೆರಳಲು ತೊಂದರೆ ಯಾಗಿದೆ,ಆದ್ದರಿಂದ ಸಮರ್ಪಕ ವಾಗಿ ಬಸ್ ಸೌಲಭ್ಯ ಕಳಿಸುವಂತೆ ಸ್ಥಳೀಯರು ಹಾಗೂ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ, ಸಮೀಪದಲ್ಲಿ ಬಾಲಕಿಯರ ವಸತಿ ನಿಲಯವಿದ್ದು,ಬೆಳ್ಳಿಗೆ ಹಾಗೂ ಸಂಜೆ ವೇಳೆ ನಡೆದುಕೊಂಡು ಹೋಗುವ ಸ್ಥಿತಿ ಉಂಟಾಗಿದೆ.
ಈ ವೇಳೆ ಚಿಂಚಳ್ಳಿ ಗ್ರಾಮದ ಮುಖಂಡರೊಬ್ಬರು ಮಾತನಾಡಿ ಚಿಂಚಳ್ಳಿ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ಮೂರು ಬಾರಿ ಮನವಿಯನ್ನು ಸಲ್ಲಿಸಲಾಗಿದೆ ಆದರೆ ಇದುವರೆಗೆ ಬಸ್ ಸೌಲಭ್ಯ ಕಲ್ಪಿಸಿಲ್ಲ ಸಂಬಂಧ ಪಟ್ಟ ಡಿಪೋ ಮ್ಯಾನೇಜರ್ ಅವರಿಗೆ ಕರೆ ಮಾಡಿದರೆ ಸ್ವೀಕರಿಸುತ್ತಿಲ್ಲ, ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತ ಪಡಿಸಿದರು ಇನ್ನೂ ಈ ಬಗ್ಗೆ ಎರಡು ಮೂರು ಬಾರಿ ಕೆ ಎಸ್ ಆರ್ ಟಿ ಸಿ ಡಿಪೋ ಅಧಿಕಾರಿಗಳಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದರೂ ಸಹ ಅಧಿಕಾರಿಗಳು ಕ್ಯಾರೇ ಎನ್ನದೆ ಇದ್ದಾರೆ, ಸಾರ್ವಜನಿಕರ ಸಮಸ್ಯೆ ಗಳನ್ನು ಬಗೆಹರಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ,
ಸಮರ್ಪಕವಾದ ಬಸ್ ಸೌಲಭ್ಯ ಒದಗಿಸದಿದ್ದರೆ ಮುಂದಿನ ದಿನಗಳಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುವುದು ಎಚ್ಚರಿಕೆ ನೀಡಿದರು.
ವರದಿ:ಉಸ್ಮಾನ್ ಖಾನ್