ಕನ್ನಡ ಸಿನಿಮಾ ರಂಗದ ಖ್ಯಾತ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾದರು.
ಲೀಲಾ ಕಿರಣ್ (ಜನ್ಮನಾಮ) ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಾಟಕ ರಂಗಭೂಮಿ ಭೂಮಿಯಲ್ಲಿ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದ ಲೀಲಾವತಿ ಅವರು ವೃತ್ತಿಜೀವನ ಆರಂಭಿಸಿದ್ದು ಮೈಸೂರಿನಲ್ಲಿ ವೃತ್ತಿ ರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಂಡರು.
ಲೀಲಾವತಿ ಅವರ ಮಗ ವಿನೋದ್ ರಾಜ್ ಕನ್ನಡ ಚಿತ್ರರಂಗದ ಖ್ಯಾತ ನಟ.ಪ್ರಸ್ತುತ ತಾಯಿ-ಮಗ ಇಬ್ಬರೂ ತೋಟಗಾರಿಕೆ ಮತ್ತು ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರು.ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕೆ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು.ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು.ಸುಬ್ಬಯ್ಯ ನಾಯ್ಡು ಅವರ ‘ಭಕ್ತ ಪ್ರಹ್ಲಾದ’ದಲ್ಲಿ ಕೂಡಾ ಅಭಿನಯಿಸಿದ್ದರು.
ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ಮಾಂಗಲ್ಯ ಯೋಗ.ಡಾ.ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ.ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು.ಸಂತ ತುಕಾರಾಂ, ಕಣ್ತೆರೆದು ನೋಡು,ಕೈವಾರ ಮಹಾತ್ಮೆ,ಗಾಳಿ ಗೋಪುರ,ಕನ್ಯಾರತ್ನ,ಕುಲವಧು,ವೀರ ಕೇಸರಿ,ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು.ಕೆಲ ಚಿತ್ರಗಳಲ್ಲಿ ನಾಯಕ ನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು.
ಸಮಾಜ ಸೇವೆ: ಬೆಂಗಳೂರಿನ ನೆಲಮಂಗಲದ ಸುತ್ತಮುತ್ತ ವಾಸಿಸುವ ಜನರ ಆರೋಗ್ಯ ಸೇವೆಗಾಗಿ ಸೋಲದೇವನಹಳ್ಳಿಯಲ್ಲಿ ಆಸ್ಪತ್ರೆಯೊಂದನ್ನು ಲೀಲಾವತಿ ಕಟ್ಟಿಸಿದ್ದಾರೆ.ಅತ್ಯಮೋಘವಾಗಿ ಅಭಿನಯಿಸಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು ಲೀಲಾವತಿಯವರು.
ವರದಿ ರಾಜಶೇಖರ ಮಾಲಿ ಪಾಟೀಲ್