ಯಾದಗಿರಿ:ಹುಣಸಗಿ ಪಟ್ಟಣದಲ್ಲಿ ನಿನ್ನೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಯಾದಗಿರಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಸುರಪುರ,ಸಮೂಹ ಸಂಪನ್ಮೂಲ ಕೇಂದ್ರ ಹುಣಸಗಿ ಎಂ.ಎನ್.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹುಣಸಗಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಪಟ್ಟಣದ ಶ್ರೀ ಸಾಯಿ ವಿಜ್ಞಾನ ಶಾಲೆಯ ಒಂದರಿಂದ ಹತ್ತನೆಯ ತರಗತಿವರೆಗಿನ ಮಕ್ಕಳು ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಸ್ಪರ್ಧೆ ಮಾಡಿ ಸುಮಾರು ಇಪ್ಪತ್ತು ಪ್ರಥಮ ಸ್ಥಾನ,ನಾಲ್ಕು ದ್ವೀತಿಯ ಸ್ಥಾನ,ಐದು ತೃತೀಯ ಸ್ಥಾನ ಪಡೆದು ಶ್ರೀ ಸಾಯಿ ವಿಜ್ಞಾನ ಶಾಲೆಯ ಕೀರ್ತಿ ಹೆಚ್ಚಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದಕ್ಕೆ ಶ್ರೀ ಸಾಯಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಸುನೀತಾ ರೆಡ್ಡಿ,ಸಂಸ್ಥೆಯ ಕಾರ್ಯದರ್ಶಿ ರಮಣ ರೆಡ್ಡಿ ಅವರು ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶ್ರೀ ಸಾಯಿ ವಿಜ್ಞಾನ ಶಾಲೆಯ ಮುಖ್ಯ ಗುರುಗಳು,ಸಹ ಶಿಕ್ಷಕರು ಶಿಕ್ಷಣ ಪ್ರೇಮಿಗಳು ಉಪಸ್ಥಿತರಿದ್ದರು.
ವರದಿ:ರಾಜಶೇಖರ ಮಾಲಿ ಪಾಟೀಲ್