ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೃಷ್ಣವೇಣಿ ಭೀಮಾ ಸಂಗಮದಲ್ಲಿ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ

ವಡಗೇರಾ:ತಾಲೂಕಿನ ಕೃಷ್ಣವೇಣಿ ಭೀಮಾ ಸಂಗಮದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ಸುಕ್ಷೇತ್ರ ಕೃಷ್ಣವೇಣಿ ಭೀಮಾ ಸಂಗಮದ ಸಂಗಮೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಷ.ಬ್ರ.ಕರುಣೇಶ್ವರ ಮಹಾಸ್ವಾಮಿಗಳ ನೇತೃತ್ವದಲ್ಲಿ ದಿನಾಂಕ 12 ಮಂಗಳವಾರ ಸಾಯಂಕಾಲ 5:00 ಗಂಟೆಗೆ ಶಿವ ದೀಪೋತ್ಸವ ಕಾರ್ಯಕ್ರಮ ಜರಗುವುದು.ಈ ಕಾರ್ಯಕ್ರಮದಲ್ಲಿ ಮಾಜಿ ಹಾಲಿ ಶಾಸಕರಿಗೂ ಹಾಗೂ ವಡಗೇರಾ ತಾಲೂಕಿನ ಹಾಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರಿಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೂ ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದರು.ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಷ.ಬ್ರ.ಕರುಣೇಶ್ವರ ಮಹಾಸ್ವಾಮಿಗಳು ವಹಿಸಿಕೊಳ್ಳುವರು ಉದ್ಘಾಟನೆಯನ್ನು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ನೆರವೇರಿಸುವರು ಗೌರವಾನ್ವಿತ ಅತಿಥಿಗಳಾದ ಮಾಜಿ ಸಚಿವರಾದ ಡಾ. ಎ.ಬಿ ಮಾಲಕರೆಡ್ಡಿ,ಮಾಜಿ ಶಾಸಕರಾದ ವೆಂಕಟರೆಡ್ಡಿ ಗೌಡ ಮುದ್ನಾಳ,ಮಾಜಿ ಶಾಸಕರಾದ ರಾಜಕುಮಾರ್ ಪಾಟೀಲ್ ಸೇಡಂ,ಶರಣಪ್ಪ ಗೌಡ ಕಾರಡ್ಡಿ ಮಲ್ಹಾರ,ಮುಖ್ಯ ಅತಿಥಿಗಳಾಗಿ ವಡಗೇರಾ ತಸಿಲ್ದಾರ್ ಶ್ರೀನಿವಾಸ್ ಚಾಪಲ್,ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ್ ಸಂಗ್ವಾರ,ಪಿ.ಎಸ್.ಐ ಕುಮಾರಿ ಜಯಶ್ರೀ,ಶಹಾಪುರ ಕೃಷಿ ಮಾರುಕಟ್ಟೆ ತಾಲೂಕು ಅಧ್ಯಕ್ಷ ಅಯ್ಯಣ್ಣ ಹಾಲಗೇರಾ ಹಾಗೂ ವಿವಿಧ ಸಂಘಟನೆಯ ಅಧ್ಯಕ್ಷರು ಪದಾಧಿಕಾರಿಗಳು ಜನಪ್ರತಿನಿಧಿಗಳು,ಮಾಜಿ ಹಾಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಭಾಗವಹಿಸುವರು ಸುತ್ತಮುತ್ತಲ ಗ್ರಾಮದ ಭಕ್ತಾದಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಸಂಗಮೇಶ್ವರ ಕೃಪೆಗೆ ಪಾತ್ರರಾಗುವಂತೆ ಮಠದ ಭಕ್ತಾದಿಗಳು ಪತ್ರಿಕಾ ಪ್ರಕಟಣೆಯ ಮೂಲಕ ಕೋರಿದ್ದಾರೆ.

ವರದಿ:ಶಿವರಾಜ ಸಾಹುಕಾರ್,ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ