ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸುಪ್ರೀಂ ಕೋರ್ಟ್ ತೀರ್ಪಿಗೆ ಮರತೂರಕರ್ ಸ್ವಾಗತ

ಕಲಬುರಗಿ:ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಸ್ವಾಗತಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಭಾರತೀಯರ ಬಹುವರ್ಷಗಳ ನಿರೀಕ್ಷೆ ಹಾಗೂ ಭಾರತದ ಸಾರ್ವಭೌಮತ್ವದ ಸುರಕ್ಷತೆಗಾಗಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಕೈಗೊಂಡ ಅರ್ಟಿಕಲ್ 370 ರದ್ದತಿ ಹಾಗೂ ಕೇಂದ್ರಾಡಳಿತ ಪ್ರದೇಶ ಘೋಷಣೆಯ ನಿರ್ಧಾರವನ್ನು ಸಂವಿಧಾನಬದ್ಧ ಆದೇಶ ಎಂದು ಮಾನ್ಯ ಮಾಡುವ ಮೂಲಕ ಸರ್ವೋಚ್ಚ ನ್ಯಾಯಲಯದ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಸಾಂವಿಧಾನಿಕ ಪೀಠದ ನಿರ್ಧಾರ ಶತಕೋಟಿ ಭಾರತೀಯರಿಗೆ ಹರ್ಷ ಉಂಟು ಮಾಡಿದೆ.ಈ ಸಂದರ್ಭದಲ್ಲಿ ನಾನು ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವರಾದ ಅಮಿತ ಷಾ ಅವರಿಗೆ ಹಾರ್ಧಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ದೂರದೃಷ್ಟಿ ಇರುವ ಭಾರತದ ಏಕತೆ ಮತ್ತು ಅಖಂಡತೆ ಎತ್ತಿ ಹಿಡಿಯುವ ದಿಟ್ಟ ನಿರ್ಧಾರ ಮಾಡಿ,ಜಮ್ಮು ಕಾಶ್ಮೀರದಲ್ಲಿ ಶಾಂತಿ,ನೆಮ್ಮದಿ ಸ್ಥಾಪನೆಗೆ ನಾಂದಿ ಹಾಡಿರುವ ನಿರ್ಣಯಕ್ಕೆ ಸುಪ್ರೀಂ ಕೋರ್ಟ್ ಸಹಮತದ ಮುದ್ರೆ ಒತ್ತಿದೆ.
ಭಾರತದ ಏಕತೆ,ಅಖಂಡತೆ ರಕ್ಷಿಸಿ,ಜಮ್ಮು ಕಾಶ್ಮೀರದ ಜನತೆಗೆ ನ್ಯಾಯ ಒದಗಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ ಶಾ ಇಟ್ಟ ದಿಟ್ಟ ಹೆಜ್ಜೆಗೆ ಸರ್ವೋಚ್ಚ ನ್ಯಾಯಲಯದ ತೀರ್ಪಿನ ಅನುಮೋದನೆಯ ಬಲವು ಸಿಕ್ಕಿದೆ.ದೇಶ ಮೊದಲು ಎನ್ನುವ ಪಕ್ಷದ ಧ್ಯೇಯವನ್ನು ಎತ್ತಿ ಹಿಡಿದ ನಮ್ಮ ಕೇಂದ್ರ ಸರಕಾರಕ್ಕೆ ಹೆಮ್ಮೆಯ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!