ಕಲಬುರಗಿ:ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಬ್ಯಾಂಕುಗಳು ಸಾಲ ವಸೂಲಾತಿಗೆ ನೋಟಿಸ್ ನೀಡುತ್ತಿದ್ದು,ಸರಕಾರ ಕೂಡಲೇ ಮಧ್ಯಪ್ರವೇಶಿಸಿ ರೈತರಿಗೆ ಯಾವುದೇ ರೀತಿಯ ನೋಟಿಸ್ ನೀಡಬಾರದು ಎಂದು ಬಿಜೆಪಿ ಮುಖಂಡ ಗುಂಡು ಮತ್ತಿಮಡು ಅವರು ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಬರ ಪರಿಸ್ಥಿತಿಯಿಂದ ರೈತರು ಸಾಕಷ್ಟು ಬೆಳೆ ಹಾನಿ ಅನುಭವಿಸಿದ್ದಾರೆ.ಇದಕ್ಕೆ ಸೂಕ್ತ ಪರಿಹಾರವನ್ನು ರೈತರಿಗೆ ಸರಕಾರ ಒದಗಿಸಿಲ್ಲ.ಕಳೆದ ತಿಂಗಳಲ್ಲಿ ಸುಮಾರು ರೈತರು ಆತ್ಮಹತ್ಯೆಗೆ ಒಳಗಾಗಿದ್ದಾರೆ ಹೀಗಿರುವಾಗ ಈಗ ಬ್ಯಾಂಕುಗಳಿಂದ ಸಾಲ ವಸೂಲಾತಿಗೆ ನೋಟಿಸ್ ನೀಡುತ್ತಿವೆ.ಇದನ್ನು ಸರಕಾರ ತಪ್ಪಿಸದೆ ಹೋದರೆ ಬರುವ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತವೆ.ಇದರ ಹೊಣೆಯನ್ನು ಸರಕಾರವೇ ಹೊರಬೇಕಾಗುತ್ತದೆ.ಸರಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರಕಾರದ ಮೇಲೆ ಬೊಟ್ಟು ತೋರಿಸದೆ ಕೂಡಲೇ ಸೂಕ್ತ ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.