ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಪ್ತಗಿರಿ ಸ್ವತಂತ್ರ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣಾ ಕಾರ್ಯಗಾರ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೀದರ್
ಬೀದರ್ ಜಿಲ್ಲೆಯ ಪ್ರಾಂಶುಪಾಲರ ಹಾಗೂ ಉಪನ್ಯಾಸಕರ ಸಂಘ ಮತ್ತು ಎಸ್ ವ್ಹಿ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಸಪ್ತಗಿರಿ ಸ್ವತಂತ್ರ ವಿಜ್ಞಾನ ಪದವಿ ಪೂರ್ವ ಕಾಲೇಜು ಬೀದರ್ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ 13-12-2023 ರಂದು ದ್ವಿತೀಯ ಪಿಯುಸಿ ಗಣಿತ,ಜೀವಶಾಸ್ತ್ರ ಮತ್ತು ಸಮಾಜಶಾಸ್ತ್ರ ವಿಷಯಗಳ ಫಲಿತಾಂಶ ಸುಧಾರಣೆಗಾಗಿ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಸಂಬಂಧಿಸಿದ ವಿಷಯಗಳ ಉಪನ್ಯಾಸಕ ವೃಂದದವರಿಗೆ ಕಾರ್ಯಗಾರ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಬೀದರ್ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಚಂದ್ರಕಾಂತ್ ಶಹಾಬಾದಕರ ರವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಗಾರಕ್ಕೆ ಚಾಲನೆ ನೀಡಿದರು ಕಾರ್ಯಗಾರದಲ್ಲಿ ಉಪನ್ಯಾಸಕರನ್ನುದ್ದೇಶಿಸಿ ಮಾತನಾಡಿ ದ್ವಿತೀಯ ಪಿಯುಸಿಯ ಫಲಿತಾಂಶ ಸುಧಾರಣೆಗಾಗಿ ಪಠ್ಯಕ್ರಮಕ್ಕೆ ಅನುಗುಣವಾಗಿ ಮಕ್ಕಳಿಗೆ ಸರಳ ವಿಧಾನದಲ್ಲಿ ಭೋದಿಸಿ ವಿವಿಧ ತಂತ್ರಗಳನ್ನು ಬಳಸಿಕೊಂಡು ನಿರಂತರ ಮಕ್ಕಳೊಂದಿಗೆ ಬೆರೆತು ಚೀಟಿ ಮುಕ್ತ ಪರೀಕ್ಷೆ ನಡೆಸಿ ಪ್ರತಿ ವರ್ಷಕ್ಕಿಂತ ಈ ವರ್ಷದ ಫಲಿತಾಂಶವನ್ನು ರಾಜ್ಯಮಟ್ಟದಲ್ಲಿ ಹೆಚ್ಚಿಸಿ ಬೀದರ್ ಜಿಲ್ಲೆಗೆ ಕೀರ್ತಿ ತರುವಂತೆ ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದರು.
ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಶ್ರೀ ಸುರೇಶ್ ಅಕ್ಕಣ್ಣ ಅವರು ಮಾತನಾಡಿ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ನಮ್ಮ ಜಿಲ್ಲಾ ಉಪ ನಿರ್ದೇಶಕರಾದ ಶ್ರೀ ಚಂದ್ರಕಾಂತ್ ಶಹಾಬಾದಕರ ಅವರ ಶ್ರಮ ತುಂಬಾ ಇದೆ ಪ್ರತಿಯೊಂದು ಕಾಲೇಜಿಗೆ ಭೇಟಿ ನೀಡಿ ಎಲ್ಲಾ ವಿಷಯಗಳ ಉಪನ್ಯಾಸಕರು ಸರಿಯಾದ ಸಮಯಕ್ಕೆ ಆಯಾ ಪರೀಕ್ಷೆ ನಡೆಸಿ ದತ್ತ ಕಾರ್ಯಯೋಜನೆಯ ವರದಿಯು ಸರಿಯಾಗಿ ಬಳಸಿಕೊಂಡಲ್ಲಿ ಮಾತ್ರ ಫಲಿತಾಂಶ ಸುಧಾರಣೆಯಾಗುವುದರಲ್ಲಿ ಎರಡು ಮಾತಿಲ್ಲ ಎಂದು ನುಡಿದರು.
ಪ್ರಾಂಶುಪಾಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮನ್ಮಥ ಡೋಳೆ ಅವರು ಮಾತನಾಡಿ ಇಲ್ಲಿ ಭಾಗವಹಿಸಿದ ಉಪನ್ಯಾಸಕರೆಲ್ಲರೂ ಕಾರ್ಯಗಾರದ ಸದುಪಯೋಗಪಡಿಸಿಕೊಂಡು ರಾಜ್ಯಮಟ್ಟದಲ್ಲಿ ಜಿಲ್ಲೆಯ ಫಲಿತಾಂಶ ಈ ವರ್ಷ ಸಿಂಗಲ್ ಡಿಜಿಟನಲ್ಲಿ ಬರುವಂತೆ ಪ್ರಯತ್ನಿಸಬೇಕು ಎಂದು ನುಡಿದರು.
ಸಪ್ತಗಿರಿ ಸ್ವತಂತ್ರ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಗೋವಿಂದರಾವ ತಾಂದಳೆ ಅವರು ಮಾತನಾಡಿ ದ್ವಿತೀಯ ಪಿಯುಸಿಯ ಫಲಿತಾಂಶ ಸುಧಾರಣೆಗಾಗಿ ನಮ್ಮ ಕಾಲೇಜಿನಲ್ಲಿ ಕಾರ್ಯಗಾರ ಹಮ್ಮಿಕೊಂಡಿರುವುದು ತುಂಬಾ ಸಂತೋಷದ ವಿಷಯ ಇದೇ ರೀತಿ ಜಿಲ್ಲೆಯಲ್ಲಿ ವಿವಿಧೆಡೆ ಕಾರ್ಯಗಾರ ಹಮ್ಮಿಕೊಳ್ಳುವುದರಿಂದ ಈ ವರ್ಷ ಜಿಲ್ಲೆಯ ಫಲಿತಾಂಶ ನೂರಕ್ಕೆ ನೂರರಷ್ಟು ಬರುವ ನಿರೀಕ್ಷೆ ಇದೆ ಇದಲ್ಲದೆ ಮಕ್ಕಳಲ್ಲಿ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ಭಯ,ಆತಂಕ ಹೋಗಲಾಡಿಸಿ ಮಾನಸಿಕವಾಗಿ ಸದೃಢಗೊಳಿಸಬೇಕೆಂದು ಮಾತನಾಡಿದರು.ಅದರಂತೆ ಜೀವಶಾಸ್ತ್ರದ ಫೋರಂನ ಅಧ್ಯಕ್ಷರಾದ ಶ್ರೀಕಾಂತ ಪಾಟೀಲ ಮತ್ತು ಗಣಿತ ವಿಷಯದ ಫೋರಂನ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಲದ್ದೆ ಹಾಗೂ ಸಮಾಜಶಾಸ್ತ್ರದ ಫೋರಂನ ಅಧ್ಯಕ್ಷರಾದ ಶ್ರೀ ಹನುಮಂತ ಗೌಡಗಾಂವಕರ ಅವರು ಉಪಸ್ಥಿತರಿದ್ದರು ಹಾಗೂ ಜಿಲ್ಲೆಯ ವಿವಿಧ ಕಾಲೇಜಿನಿಂದ ಆಗಮಿಸಿದ ಉಪನ್ಯಾಸಕರು ಹಾಗೂ ಸಪ್ತಗಿರಿ ಸ್ವತಂತ್ರ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಸಿಬ್ಬಂದಿ ವರ್ಗದವರಾದ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಸಲಾಉದ್ದಿನ,ಬೀರೇಶ ಯಾತನೂ‌ರ,ಜೀವಶಾಸ್ತ್ರ ಉಪನ್ಯಾಸಕರಾದ ಡಾ||ಆಸಿಫ್,ಭೌತಶಾಸ್ತ್ರ ಉಪನ್ಯಾಸಕರಾದ ಆಸಿಫ್ ಅಲಿ,ಗಣಿತ ಉಪನ್ಯಾಸಕರಾದ ಚಂದ್ರಕಾಂತ ಝಬಾಡೆ, ಭೌತಶಾಸ್ತ್ರ ಉಪನ್ಯಾಸಕರಾದ ಮಾಧವ ತಪಸಾಳೆ, ಜೀವಶಾಸ್ತ್ರ ಉಪನ್ಯಾಸಕರಾದ ಸಂತೋಷ ಗಿರಿ, ಗಣೇಶ ರೆಡ್ಡಿ,ಜೀತೆಂದ್ರ,ಸುನಿಲ ಕುಲ್ತೆ,ಸೈಯದ ಜಾಫರ್ ಅಲಿ,ಕು.ಪ್ರಾಜಕ್ತಾ,ಕು.ಅಶ್ವಿನಿ,ಶ್ರೀಮತಿ ಅಂಬಿಕಾ,ನಾಗರಾಜ,ಪ್ರೇಮಕುಮಾರ,ಬಾಲಾಜಿ ಪಾಂಡ್ರೆ,ನಿಷಾ,ಭವ್ಯ,ದಿವ್ಯ ಹಾಗೂ ಇತರ
ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಜೀವಶಾಸ್ತ್ರದ ಉಪನ್ಯಾಸಕರಾದ ಶ್ರೀ ಅನಿಲ ಜಾಧವ ಅವರು ನಿರೂಪಿಸಿದರು.
ಕನ್ನಡ ಉಪನ್ಯಾಸಕರಾದ ಶ್ರೀ ಬೀರೇಶ್ ಯಾತನೂರ ಅವರು ಸ್ವಾಗತಿಸಿದರು.ಆಂಗ್ಲ ಭಾಷಾ ಉಪನ್ಯಾಸಕರಾದ ಶ್ರೀ ಸಾಗರ ಪಡಸಾಲೆ ವಂದಿಸಿದರು.
ವರದಿ-ಚಂದ್ರಕಾಂತ ಝಬಾಡೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ