ಕಲ್ಬುರ್ಗಿ ಸುದ್ದಿ:ಸಮಗ್ರ ಶಿಕ್ಷಣ ಯೋಜನೆ ಅಡಿಯಲ್ಲಿ 2023-24ನೇ ಸಾಲಿನ ವಾರ್ಷಿಕ ಯೋಜನಾ ಅನುದಾನದ ಅಡಿಯಲ್ಲಿ ಕರ್ನಾಟಕ ರಾಜ್ಯದ 5307 ಪ್ರೌಢಶಾಲೆಗಳಲ್ಲಿ ಕರಾಟೆ ತರಬೇತಿ ನೀಡುವಂತೆ ಸರ್ಕಾರ ಸುತ್ತೋಲೆಯನ್ನು ಹೊರಡಿಸಿತು ಸುತ್ತೋಲೆಯ ಪ್ರಕಾರ ಅನುದಾನ 159.21 ಲಕ್ಷ ಹಣ ಬಿಡುಗಡೆ ಮಾಡದೆ ವಿಳಂಬ ಧೋರಣೆ ಅನುಸರಿಸಿದ್ದು ಯಕ್ಷ ಪ್ರಶ್ನೆಯಾಗಿದೆ ಅಷ್ಟೇ ಅಲ್ಲದೆ ಇತ್ತೀಚಿನ ದಿನಮಾನಗಳಲ್ಲಿ ಹೆಣ್ಣು ಮಕ್ಕಳ ಮೇಲೆ ಅನೇಕ ರೀತಿಯ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿನಿಯರ ಸ್ವಯಂ ರಕ್ಷಣೆಯ ದೃಷ್ಟಿಯಿಂದ ಸರಕಾರ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಅದೇ ರೀತಿಯಾಗಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕರ್ನಾಟಕ ರಾಜ್ಯದ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಕರಾಟೆ ಸಮವಸ್ತ್ರಗಳನ್ನು ವಿತರಿಸಲಾಗಿದೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ 2023 ಹಾಗೂ 24ನೇ ಸಾಲಿನ ಕರಾಟೆ ಶಿಕ್ಷಕರ ಅನುದಾನ ಬಿಡುಗಡೆ ಮಾಡಿರುವುದಿಲ್ಲ ಕೂಡಲೇ ಇದಕ್ಕೆ ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಶಿಕ್ಷಣ ಸಚಿವರು ಈ ಕೂಡಲೇ ಶಾಲಾ ಹೆಣ್ಣು ಮಕ್ಕಳ ಹಿತ ದೃಷ್ಟಿಯಿಂದ ಕರಾಟೆ ತರಬೇತಿದಾರರ ಅನುದಾನ ಬಿಡುಗಡೆ ಮಾಡಬೇಕು ಎಂದು ಕನಕ ಕಾರ್ಮಿಕ ಕಲ್ಯಾಣ ಸಂಘದ (ರಿ.)ಯುವ ಘಟಕದ ರಾಜ್ಯಾಧ್ಯಕ್ಷರಾದ ಮಲ್ಲಣ್ಣ ಎಂ ಪೂಜಾರಿ ಬಿಳವಾರ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಕರ್ನಾಟಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.