ಚಿತ್ರದುರ್ಗ: ರಾಷ್ಟ್ರಕವಿ ಕುವೆಂಪು ಜನ್ಮದಿನದ ಅಂಗವಾಗಿ ಡಿ 29ರ ಬೆಳಿಗ್ಗೆ11 ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ವಿಶ್ವಮಾನವ ದಿನವನ್ನು ಆಚರಿಸಲಾಗುತ್ತಿದೆ ಎಂದು ಉಪ ವಿಭಾಗಾಧಿಕಾರಿ ಆರ್ ಕಾರ್ತಿಕ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಿ
ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.
ಕುವೆಂಪು ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಸಮಾರಂಭದಲ್ಲಿ ಗೀತ ಗಾಯನ ಕಾರ್ಯಕ್ರಮವಿರುತ್ತದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್ ಕೆ ಮಲ್ಲಿಕಾರ್ಜುನ ಮಾತನಾಡಿ. ಕುವೆಂಪು ಕುರಿತು ಪ್ರೌಢಶಾಲೆ. ಪಿಯು. ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಆಸಕ್ತರು ಮುಖ್ಯ ಶಿಕ್ಷಕರು,ಪ್ರಾಚಾರ್ಯರ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಬಹುದು
ಹೆಚ್ಚಿನ ಮಾಹಿತಿಗಾಗಿ ಡಿಡಿಪಿಐ,ಪಿಯು, ಉಪ ನಿರ್ದೇಶಕರ ಕಚೇರಿ ಅಥವಾ ನಗರದ ಸರಕಾರಿ ಕಲಾ ಕಾಲೇಜು ಮುಖ್ಯಸ್ಥರನ್ನು ಸಂಪರ್ಕಿಸಬಹುದು. ವಿಜೇತರಿಗೆ ನಗದು ಬಹುಮಾನ ನೀಡಿ ಪುರಸ್ಕರಿಸಲಾಗುವುದು ಎಂದು ಹೇಳಿದರು.
ಕೃಷಿ ಇಲಾಖೆ ಉಪ ನಿರ್ದೇಶಕ ನಟರಾಜ್. ಸಮಾಜ ಕಲ್ಯಾಣ ಇಲಾಖೆ ಪತ್ರಾಂಕಿತ ಸಹಾಯಕ ಹರೀಶ್, ಚಿದಾನಂದ ಸ್ವಾಮಿ ಮತಿತ್ತರು ಇದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.