ಕಲಬುರಗಿ:ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳಾಗಿರುವ ಗೋವಿಂದ ಕಾರಜೋಳ ಅವರು ಚಿತ್ರದುರ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸುವಾಗ ಕಾಂಗ್ರೆಸ್ ಕಡೆಯವರು ಬಂದು ಗಲಾಟೆ ಮಾಡಿ ಅವರನ್ನು ಎಳೆದಾಡಿ ಅವಮಾನ ಮಾಡಿದ್ದನ್ನು ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಖಂಡಿಸಿದ್ದಾರೆ.
ಗೋವಿಂದ ಕಾರಜೋಳ ರಾಜ್ಯಾದ್ಯಂತ ಮಾದಿಗ ಸಮಾಜಕ್ಕೆ ಸಾಮಾಜಿಕ ನ್ಯಾಯ ಒದಗಿಸುವ ಸಲುವಾಗಿ ಸಂಘಟನೆ ಮಾಡುತ್ತಿರುವುದನ್ನು ಸಹಿಸಲಾಗದೆ ಅವರ ಮೇಲೆ ಅಸೂಯೆಯಿಂದ ಅಮಾನವೀಯವಾಗಿ ನಡೆದುಕೊಂಡಿದ್ದಾರೆ.ಇಂತಹ ಒಂದು ಗುಂಡಾ ಪ್ರವೃತ್ತಿ ಕಾಂಗ್ರೆಸ್ ನ ರಕ್ತದಲ್ಲಿದೆ ಸದಾ ದಲಿತ ವಿರೋಧಿಗಳಾಗಿ ಕಾಂಗ್ರೆಸ್ ಕೆಲಸ ಮಾಡುತ್ತಿದೆ ಎಂದು ಅವರು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ದಲಿತರಿಗೆ ಇಲ್ಲ ಸಲ್ಲದ ಆಶ್ವಾಸನೆ ಕೊಟ್ಟು ಈ ಸರಕಾರ ಅಧಿಕಾರಕ್ಕೆ ಬಂದಿದೆ ಆದರೆ,ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಂಡಂತೆ 11 ಸಾವಿರ ಕೋಟಿ ರೂಪಾಯಿ ದಲಿತರ ಹಣಕ್ಕೆ ಕನ್ನ ಹಾಕಿದ್ದೀರಿ. ಈ ನಿಮ್ಮ ನಡೆಯ ಕುರಿತು ಜನರಿಗೆ ತಿಳಿಸುವ ಆಂದೋಲನ ಮಾಡುತ್ತೇವೆ ಕಾಂಗ್ರೆಸ್ ಗೂಂಡಾಗಿರಿ ಹೀಗೆ ಮುಂದುವರಿದರೆ ಅದಕ್ಕೆ ತಕ್ಕ ಉತ್ತರವನ್ನು ಬಿಜೆಪಿ ಕಾರ್ಯಕರ್ತರು ಕೊಡಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.ರಾಜ್ಯದಲ್ಲಿ ಕಾಗ್ರೆಸ್ ಅಧಿಕಾರಕ್ಕೆ ಬಂದ 3-4 ತಿಂಗಳಲ್ಲೇ ದಲಿತರ ಮೇಲೆ ಮಹಿಳೆಯರ ಮೇಲೆ ಪ್ರಕರಣಗಳು ದಾಖಲಾಗುತ್ತಿದ್ದು,ದೌರ್ಜನ್ಯ ಮಿತಿಮೀರಿದೆ ಎಂದು ದೂರಿದರು.ಕಾಂಗ್ರೆಸ್ ದುರಾಡಳಿತದ ವಿರುದ್ದ ಜನ ಜಾಗೃತರಾಗಬೇಕು.ಮತ್ತು ಸರಕಾರದ ಗುಂಡಾ ವರ್ತನೆಯ ವಿರುದ್ಧ ಹೋರಾಟಕ್ಕೆ ಮುಂದಾಗಬೇಕೆಂದು ಅವರು ಮನವಿ ಮಾಡಿಕೊಂಡರು.
ಚಿತ್ರದುರ್ಗದಲ್ಲಿ ಬಿಜೆಪಿ ಮುಖಂಡ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಪತ್ರಿಕಾಗೋಷ್ಠಿ ಮಾಡುವಾಗ ಕೆಲವು ಕಾಂಗ್ರೆಸ್ ಗೂಂಡಾಗಳು ಬಂದು ಅವರ ಮೇಲೆ ಇಲ್ಲಸಲ್ಲದ ಆಪಾದನೆ ಮಾಡಿದ್ದಾರೆ. ಜೊತೆಗೆ ಅವರ ಪತ್ರಿಕಾಗೋಷ್ಠಿಗೆ ತೊಂದರೆಯನ್ನುಂಟು ಮಾಡಿ ಅವರ ಮೇಲೆ ಎರಗಿದ್ದು ಖಂಡನೀಯ ಎಂದರು.
ಹಲ್ಲೆಯ ಪ್ರಯತ್ನದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಆರೋಪ ಮಾಡಿದ ಅವರು, ದಲಿತರು ಜಾಗೃತ ಆಗಬಾರದು.ಈ ಸಂಬಂಧ ತಿಳುವಳಿಕೆ ಕೊಡುವ ಕೆಲಸವನ್ನು ಮಾಡಬಾರದೆಂಬ ಉದ್ದೇಶದಿಂದ ಭಯ ಹುಟ್ಟಿಸಲು ಈ ರೀತಿಯ ಹಲ್ಲೆ ನಡೆಸಲಾಗುತ್ತಿದೆ ಎಂದರು.
