ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಾಡಿಗೆ ಅನ್ನ ನೀಡುವ ರೈತರ ಬಗ್ಗೆ ಆಳುವ ಸರ್ಕಾರಗಳು ಗಮನ ನೀಡುತ್ತಿಲ್ಲ:ಚಿದಾನಂದಗೌಡ

ಸೊರಬ:ರಾಜ್ಯದಲ್ಲಿ ಅನೇಕ ಮಹನೀಯರ ದಿನಾಚರಣೆಗಳನ್ನು ಸರ್ಕಾರ ಅದ್ಧೂರಿಯಾಗಿ ಆಚರಿಸುತ್ತಿದೆ.ಆ ನಿಟ್ಟಿನಲ್ಲಿ ದೇಶದ ಬೆನ್ನೆಲುಬಾದ ರೈತರ ದಿನವನ್ನು ಸಹ ಸರ್ಕಾರದಿಂದ ಆಚರಿಸಬೇಕು ಎಂದು ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್.ಚಿದಾನಂದಗೌಡ ಒತ್ತಾಯಿಸಿದರು.

ಪಟ್ಟಣದ ಪುರಸಭೆ ಮುಂಭಾಗದಲ್ಲಿ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ,ಗೋ ಸಂರಕ್ಷಣಾ ಹೋರಾಟ ಸಮಿತಿಯಿಂದ ಹಮ್ಮಿಕೊಂಡಿದ್ದ ರೈತ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾಡಿಗೆ ಅನ್ನ ನೀಡುವ ರೈತರ ಬಗ್ಗೆ ಆಳುವ ಸರ್ಕಾರಗಳು ಗಮನ ನೀಡುತ್ತಿಲ್ಲ ಈಗಾಗಲೇ ರಾಜ್ಯದಲ್ಲಿ ರೈತಾಪಿ ವರ್ಗ ಸಂಕಷ್ಟದಲ್ಲಿ ಸಿಲುಕಿದೆ. ನಮ್ಮ ಸಮಿತಿಯಿಂದ ಕಳೆದ ಎಂಟು ವರ್ಷಗಳಿಂದ ಹೋರಾಟ ಹಾಗೂ ರೈತ ದಿನಾಚರಣೆ ಮಾಡಿಕೊಂಡು ಬಂದಿದ್ದೇವೆ ರೈತ ದಿನಾಚರಣೆಯನ್ನು ಸರ್ಕಾರದಿಂದ ಆಚರಿಸದೇ ಹೋದರೆ ಮುಂದಿನ ದಿನಗಳಲ್ಲಿ ವಿಧಾನಸೌಧ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದರು.

ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ.ಎಸ್.ಶಂಕರ್ ಶೇಟ್ ಮಾತನಾಡಿ,ದೇಶ ಕಾಯುವ ಯೋಧ ಮತ್ತು ನಾಡಿಗೆ ಅನ್ನ ನೀಡುವ ರೈತರಿಗೆ ಗೌರವಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗದೆ. ಸರ್ಕಾರದಿಂದಲೇ ರೈತ ದಿನಾಚರಣೆಯಾಗಬೇಕು ಎಂದರು.

ಪುರಸಭೆ ಮಾಜಿ ಅಧ್ಯಕ್ಷ ಪ್ರಶಾಂತ್ ಮೇಸ್ತಿç ಮಾತನಾಡಿದರು.ಮಂಜುನಾಥ ಗುತ್ತಿ ಅವರ ರೈತ ಕ್ಯಾಂಟೀನ್ ಮೂಲಕ ಜನತೆಗೆ ಉಚಿತವಾಗಿ ಫಲಾಹಾರ ವಿತರಿಸಲಾಯಿತು.
ಈ ಸಂದರ್ಭದಲ್ಲಿ
ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಉಪಾಧ್ಯಕ್ಷ ಕೆ.ವಿ.ದತ್ತಾತ್ರೇಯ,ಕಾರ್ಯದರ್ಶಿ ಶರತ್ ಸ್ವಾಮಿ,ಸದಸ್ಯರಾದ ಮಂಜುನಾಥ ಗುತ್ತಿ,ಎಸ್.ಪಿ. ನಾಗಪ್ಪ,ನಿತಿನ್ ಕುಮಾರ್,ಪ್ರಕಾಶ್,ವಿನಯ, ದೀಪಕ್, ಬೆನಕೇಶಿ,ಮಾರುತಿ ತಾತಪ್ಪ,ಹಿರಿಯಣ್ಯಪ್ಪ, ಯುವರಾಜ,ಶಿವಪ್ಪ,ನಿಂಗಪ್ಪ ಕೊಡಕಣಿ ಸೇರಿದಂತೆ ಹಲವರಿದ್ದರು.

ವರದಿ-ಸಂದೀಪ ಯು.ಎಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ