ಶಿವಮೊಗ್ಗ:ಬೆಳಗಾಂ ಜಿಲ್ಲೆಯ ಬೈಲಹೊಂಗಲ ತಾಲ್ಲೂಕು ಕೊಳಗೇರಿ ನಿವಾಸಿಗಳ ಹಕ್ಕು ಪತ್ರಕ್ಕಾಗಿ ಅಹೋ ರಾತ್ರಿ ಧರಣಿ ಸತ್ಯಾಗ್ರಹವನ್ನು ಬೆಂಬಲಿಸಿ ಕರ್ನಾಟಕ ತ್ರಿಮತಸ್ಥ ಶ್ರೀಗುರು ರವಿದಾಸ್ ಪರಿಷತ್ (ರಿ.) ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು,
ಬೆಳಗಾಂ ಜಿಲ್ಲೆಯ ಬೈಲಹೊಂಗಲ್ ತಾಲ್ಲೂಕು, ಕೊಳಗೇರಿಯಲ್ಲಿ 50 ವರ್ಷಗಳಿಂದ ವಾಸಿಸುತ್ತಿರುವ 40 ಬಡ ಕುಟುಂಬಗಳು ಹಕ್ಕು ಪತ್ರಕ್ಕಾಗಿ ಅಹೋರಾತ್ರಿ ದಿನಾಂಕ 04/12/2023ರಿಂದ ನಿರಂತರವಾಗಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರಿಗೆ ಮುಖ್ಯ ಮಂತ್ರಿಗಳು ಸ್ಪಂದಿಸಿ ಹಕ್ಕು ಪತ್ರ ನೀಡುವಂತೆ ಒತ್ತಾಯಿಸಿ ಕರ್ನಾಟಕ ತ್ರಿಮತಸ್ಥ ಶ್ರೀ ಗುರು ರವಿದಾಸ್ ಪರಿಷತ್ (ರಿ) ನಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮನವಿ ಸಲ್ಲಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಸಂಚಾಲಕ ಚನ್ನವೀರಪ್ಪ ಗಾಮನಗಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
