ಶಿವಮೊಗ್ಗ:ಜಿಲ್ಲೆಯ ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ.ಸಂಗಮೇಶ್ವರ್ ರವರ ಆಪ್ತ ಸಹಾಯಕರೊಬ್ಬರು ಸೋಮವಾರ ರಾತ್ರಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ರವರ ಆಪ್ತ ಸಹಾಯಕ ಈಶ್ವರ್ ಕೂಡ್ಲಿಗೆರೆ ಬಳಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.ಇವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳು ಇದ್ದಾರೆ.ಈಶ್ವರ್ ಕೆಲಸದ ನಿಮಿತ್ತ ಕೂಡ್ಲಿಗೆರೆ ಗ್ರಾಮಕ್ಕೆ ತೆರಳಿ ಪುನಃ ನಗರಕ್ಕೆ ಹಿಂದಿರುಗಿ ಬರುವಾಗ ಲಾರಿಯೊಂದು ಇವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೂಲತಃ ಶಿರಸಿಯವರಾದ ಈಶ್ವರ್ ಶಾಸಕ ಸಂಗಮೇಶ್ವರ ಆವರ ಆಪ್ತ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದರಿಂದ ತಾಲ್ಲೂಕಿನ ಕಲ್ಲಿಹಾಳ್ ಗ್ರಾಮದಲ್ಲಿ ವಾಸವಾಗಿದ್ದರು ಸೋಮವಾರ ರಾತ್ರಿ ಮರಣೋತ್ತರ ಪರೀಕ್ಷೆಯ ನಂತರ ಮಂಗಳವಾರ ಬೆಳಿಗ್ಗೆ ವರೆಗೆ ಕಲ್ಲಿಹಾಳ್ ಗ್ರಾಮದಲ್ಲಿ ಮೃತದೇಹವನ್ನು ಅಂತಿಮ ದರ್ಶನಕ್ಕಾಗಿ ಇರಿಸಲಾಗಿತ್ತು ಈಶ್ವರ್ ಪಾರ್ಥಿವ ಶರೀರವನ್ನು ಪತ್ನಿಯ ಅಪೇಕ್ಷೆಯಂತೆ ಬೆಳಿಗ್ಗೆ ಮೃತರ ಹುಟ್ಟೂರು ಶಿರಸಿಗೆ ಕೊಂಡೊಯ್ಯಲಾಯಿತು ಮಂಗಳವಾರ ಸಂಜೆ ಶಿರಸಿಯಲ್ಲಿ ಅಂತಿಮ ವಿಧಿ ವಿಧಾನಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.ಶಾಸಕರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದು,ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಕುಟುಂಬ ವರ್ಗದವರು, ವಿವಿಧ ಸಂಘ-ಸಂಸ್ಥೆಗಳ ಗಣ್ಯರು ಸೇರಿದಂತೆ ಹಲವರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.
ಈಶ್ವರ್ ನನ್ನ ಶಕ್ತಿಯಾಗಿದ್ದರು:ಶಾಸಕ ಬಿ ಕೆ ಸಂಗಮೇಶ್ವರ್
ಶಾಸಕ ಬಿ ಕೆ ಸಂಗಮೇಶ್ವರ್,ಈಶ್ವರ್ ತಮಗೆ ಕೇವಲ ಪಿ ಎ ಮಾತ್ರ ಆಗಿರಲಿಲ್ಲ.ನನ್ನ ಶಕ್ತಿಯಾಗಿದ್ದರು. ಈಶ್ವರ್ ನಿಧನದಿಂದ ಅತ್ಯಂತ ಸರಳ ವ್ಯಕ್ತಿತ್ವದ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದು,ಈಶ್ವರ್ ಸಾವನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ.ಮೃತರ ಕುಟುಂಬಕ್ಕೆ ದುಃಖವನ್ನು ತಡೆದುಕೊಳ್ಳಲು ಶಕ್ತಿ ನೀಡಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ವರದಿ:ಕೆ ಆರ್ ಶಂಕರ್ ಭದ್ರಾವತಿ