ಚಿತ್ರದುರ್ಗ ಬೀರಾವರ ಗ್ರಾಮದ ಸರ್ಕಾರಿ ಶಾಲೆಯ 38 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿ ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದಾರೆ.ಇವರನ್ನು ಚಿತ್ರದುರ್ಗದ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಯಿತು.
ಡಾಕ್ಟರ್ ರವೀಂದ್ರ ಮಾತನಾಡಿ
ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ ಎಂದು ದೃಢಪಡಿಸಿ,ಆಹಾರ ಸಮಸ್ಯೆಯಿಂದ ಈ ರೀತಿ ಘಟನೆ ನಡೆದಿದೆ ಎಂದು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರವಿಶಂಕರ್ ರೆಡ್ಡಿ ಆಗಮಿಸಿ ಮಕ್ಕಳ ಆರೋಗ್ಯ ಸಮಸ್ಯೆಯನ್ನು ವಿಚಾರಿಸಿದರು ಮತ್ತು ಪೋಷಕರಿಗೆ ಧೈರ್ಯ ತುಂಬಿದರು.
ಸ್ಥಳಕ್ಕೆ ಅಕ್ಷರ ದಾಸೋಹ ಇಲಾಖೆ ಅಧಿಕಾರಿಗಳು ಕೂಡಾ ಭೇಟಿ ನೀಡಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.