ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕೃಷಿ ಭಾಗ್ಯ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನ

ಯಾದಗಿರಿ:2023-24ನೇ ಸಾಲಿನ ಕೃಷಿ ಭಾಗ್ಯ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಂಟಿ ಕೃಷಿ ನಿರ್ದೇಶಕರು ಅವರು ತಿಳಿಸಿದ್ದಾರೆ.
ಮಳೆಯಾಶ್ರಿತ ಕೃಷಿ ನೀತಿ,2014 ರನ್ವಯ ರಾಜ್ಯದ 5 ಒಣ ಹವಾಮಾನ ವಲಯಗಳ 24 ಬರ ಪೀಡಿತ ಜಿಲ್ಲೆಗಳಲ್ಲಿನ 106 ತಾಲ್ಲೂಕುಗಳಲ್ಲಿ ಹಾಗೂ ಗಣಿಗಾರಿಕೆಯಿಂದ ಬಾದಿತ ಪ್ರದೇಶದಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ,ಬೆಳೆ ಉತ್ಪಾದಕತೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುವುದರೊಂದಿಗೆ ಬರ ಉಪಶಮನದ ಗುರಿಯೊಂದಿಗೆ ಕೃಷಿ ಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರವು ಅನುಮೊದಿಸಿದ್ದು ಅದರಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.ಕೃಷಿ ಭಾಗ್ಯ ಯೋಜನೆಯನ್ನು ಒಂದು ಪ್ಯಾಕೇಜ್ ರೂಪದಲ್ಲಿ ಒಟ್ಟಾರೆ 6 ಘಟಗಳಾದ (ಕ್ಷೇತ್ರ ಬದು ನಿರ್ಮಾಣ, ನೀರು ಸಂಗ್ರಹಣಾ ರಚನೆ (ಕೃಷಿ ಹೊಂಡ),ನೀರು ಹಿಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ,ಕೃಷಿ ಹೊಂಡ ಸುತ್ತಲೂ ತಂತಿ ಬೇಲಿ, ಹೊಂಡದಿಂದ ನೀರು ಎತ್ತಲು ಡಿಸೇಲ್,ಪೆಟ್ರೋಲ್, ಸೋಲಾರ್ ಪಂಪ್‌ಸೆಟ್, ನೀರನ್ನು ಬೆಳೆಗೆ ಹಾಯಿಸಲು ತುಂತುರು ನೀರಾವರಿ ಘಟಕ)ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅಳವಡಿಕೆ ಮಾಡಿಕೊಳ್ಳಬೇಕು.
ರೈತರ ಒಟ್ಟು ಸಾಗುವಳಿ ಕ್ಷೇತ್ರದ ಒಂದು ಸರ್ವೆ ನಂಬರ್‌ನಲ್ಲಿ ಕನಿಷ್ಠ 1 ಎಕರೆ ಇರಬೇಕು ಹಿಂದಿನ ಸಾಲುಗಳಲ್ಲಿ ಕೃಷಿ ಭಾಗ್ಯ ಯೋಜನೆ ಅಥವಾ ಇನ್ಯಾವುದೇ ಯೋಜನೆಯಡಿ ಕೃಷಿ ಹೊಂಡ ಫಲಾನುಭವಿಯಾಗಿರುವ ರೈತರು ಸದರಿ ಯೋಜನೆಗೆ ಅರ್ಹತೆ ಹೊಂದಿರುವುದಿಲ್ಲ (ಕೆ-ಕಿಸಾನ್ ಪೋರ್ಟಲ್ ನಡಿ, ಭೌತಿಕವಾಗಿ ಸ್ಥಳ ಪರಿಶೀಲಿಸಿ ಖಾತರಿಪಡಿಸಿಕೊಳ್ಳಲಾಗುತ್ತದೆ).
ರೈತರು ನಿಗದಿತ ನಮೂನೆಯಲ್ಲಿ ಈ ಕೆಳಕಂಡ ದಾಖಲಾತಿಗಳೊಂದಿಗೆ (ರೈತರ ಮೂಲ ದಾಖಲೆಗಳಾದ ರೈತರ ಅರ್ಜಿ,ಎಫ್‌ಐಡಿ,ರೈತರ ಭಾವಚಿತ್ರ,ರೈತರ ಎಫ್‌ಐಡಿ ಇಲ್ಲದಿದ್ದಲ್ಲಿ ಆಧಾರ್ ಪ್ರತಿ,ಪಹಣಿ ಪ್ರತಿ, ಜಾತಿ ಪ್ರಮಾಣ ಪತ್ರ,ಬ್ಯಾಂಕ್ ಪಾಸ್ ಬುಕ್ ಪ್ರತಿ,ಕೃಷಿ ಭಾಗ್ಯ ಅರ್ಜಿ ನಮೂನೆ-1,ರೈತರ ಸ್ವಯಂ ಘೋಷಣೆ ಅನುಬಂಧ-೩ಎ,ನಿರಪೇಕ್ಷಣಾ ಪತ್ರ ಇತರೆ ಇಲಾಖೆಗಳಿಂದ (ಎನ್‌ಒಸಿ) ಕ್ಷೇತ್ರ ಬದು,ಕೃಷಿ ಹೊಂಡ, ಡೀಸೆಲ್ ಪಂಪ್ ಸೆಟ್,ಸೂಕ್ಷ್ಮ ನೀರಾವರಿ ಘಟಕಗಳಿಗೆ ಸಹಾಯಧನ ಪಡೆದಿಲ್ಲ ಎಂಬುವುದರ ಬಗ್ಗೆ) ಅದರಿಂದ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದಲ್ಲಿ ಭರ್ತಿಮಾಡಿ 2024ರ ಜನವರಿ 1ರ ಒಳಗೆ ಅರ್ಜಿಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ:ಶಿವರಾಜ ಸಾಹುಕಾರ್,ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ