ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ:
ಮುಖ್ಯ ಶಿಕ್ಷಕರ ವಿರುದ್ದ ಕ್ರಮಕ್ಕೆ ಡಿ ಎಸ್ ಎಸ್
ಆಗ್ರಹ :
ಭದ್ರಾವತಿ:ಶಿಕ್ಷಣ ಸಚಿವರ ತವರು ಜಿಲ್ಲೆಯಾದ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಗುಡ್ಡದ ನೇರಳೆಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ವಿದ್ಯಾರ್ಥಿಗಳು ಶೌಚಾಲಯವನ್ನು ಸ್ವಚ್ಛಗೊಳಿಸಿರುವ ಘಟನೆ ನಡೆದಿದೆ.
ಘಟನೆ ಕುರಿತು ದಲಿತ ಸಂಘರ್ಷ ಸಮಿತಿ ಮುಖಂಡರು ಉಪವಿಭಾಗಾಧಿಕಾರಿಯವರಿಗೆ ಮನವಿ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗುಡ್ಡದ ನೇರಳೆಕೆರೆಯಲ್ಲಿ ಶಾಲೆಯ ಮಕ್ಕಳಿಂದ ಶೌಚಾಲಯ ಸ್ವಚ್ಚಗೊಳಿಸಿದ ಮುಖ್ಯ ಶಿಕ್ಷಕ ಶಂಕ್ರಪ್ಪ ವಿರುದ್ದ ಆಗಾಗ್ಗೆ ಮಕ್ಕಳಿಂದ ಶಾಲೆಯ ಶೌಚಾಲಯ ಸ್ವಚ್ಛಗೊಳಿಸುವ ಆರೋಪ ಕೇಳಿ ಬಂದಿದೆ.
ದಲಿತ ಸಂಘರ್ಷ ಸಮಿತಿ ಮುಖ್ಯ ಶಿಕ್ಷಕರ ವಿರುದ್ದ ಈ ಬಗ್ಗೆ ಉಪವಿಭಾಗಾಧಿಕಾರಿ ರವರಿಗೆ ದೂರು ನೀಡಿದೆ. ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಮುಖ್ಯ ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.
ಶಾಲೆಯ ಶೌಚಾಲಯಗಳನ್ನ ಸ್ವಚ್ಛಗೊಳಿಸಲು ಸಿಬ್ಬಂದಿಗಳನ್ನ ನೇಮಿಸಿಕೊಂಡು ಸ್ವಚ್ಚ ಮಾಡಿಸದೆ ವಿದ್ಯಾರ್ಥಿಗಳಿಂದಲೇ ಸ್ವಚ್ಚಗೊಳಿಸಲು ಶಾಲೆ ಮುಂದಾಗಿದೆ.ಈ ಬಗ್ಗೆ ಪೋಷಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಕೇಳಿದಾಗ ಪೋಷಕರ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿಯ ಮನವಿಯಲ್ಲಿ ತಿಳಿಸಿದೆ.ಶಿಕ್ಷಣ ಸಚಿವರು ಸಂಬಂಧಪಟ್ಟ ಶಿಕ್ಷಕರ ವಿರುಧ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ.
ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಕ್ಷೀಣಿಸುತ್ತಿರುವ ದಿನಗಳಲ್ಲಿ ಇಂತಹ ಘಟನೆಗಳು ನಡೆದರೆ,ಪೋಷಕರು ಮತ್ತೆ ಖಾಸಗಿ ಶಾಲೆಗಳತ್ತ ಮುಖಮಾಡಿದರೂ ಅಚ್ಚರಿಯಿಲ್ಲ ಆದ್ದರಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಎಸ್ ಬಂಗಾರಪ್ಪ ಅವರು ಸಂಬಂಧಪಟ್ಟ ಶಿಕ್ಷಕರ ವಿರುಧ್ದ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಬೇಕು ಹಾಗೂ ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಎಲ್ಲೆಲ್ಲಿ ಸಿಬ್ಬಂದಿ ಕೊರತೆ ಇದೆಯೋ ಅಲ್ಲಿ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳುವ ಮೂಲಕ ಈ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಸಬೇಕು ಎಂಬುದೇ ಕರುನಾಡ ಕಂದ ಪತ್ರಿಕೆಯ ಆಶಯ.
ವರದಿ:ಕೆ ಆರ್ ಶಂಕರ್ ಭದ್ರಾವತಿ