ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಓಂ ಶಕ್ತಿ ಜ್ಞಾನವಿಕಾಸ ಕೇಂದ್ರದ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ

ಸೊರಬ ತಾಲೂಕಿನ ಹೊಸಬಾಳೆ ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಓಂ ಶಕ್ತಿ ಜ್ಞಾನವಿಕಾಸ ಕೇಂದ್ರದ ಪ್ರಥಮ ವರ್ಷದ ವಾರ್ಷಿಕೋತ್ಸವ ಸೋಮವಾರ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಯೋಜನಾಧಿಕಾರಿ ಸುಬ್ರಾಯ ನಾಯ್ಕ ಮಾತನಾಡಿ, ಜ್ಞಾನವಿಕಾಸ ಕೇಂದ್ರದ ಮೂಲಕ ಸದಸ್ಯರಿಗೆ ಪ್ರತಿ ತಿಂಗಳು ಆರೋಗ್ಯ,ಶಿಕ್ಷಣ,ಕಾನೂನು ಅರಿವು,ಮಕ್ಕಳ ಪಾಲನೆ ಪೋಷಣೆ,ಸಂಸ್ಕೃತಿ ಮತ್ತು ಸಂಸ್ಕಾರ, ಕುಟುಂಬ ನಿರ್ವಹಣೆ,ಸ್ವ-ಉದ್ಯೋಗ ಇತ್ಯಾದಿ ವಿಚಾರಗಳ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಕೊಡಿಸಲಾಗುತ್ತಿದೆ ಜ್ಞಾನವಿಕಾಸ ಕೇಂದ್ರದಿಂದ ಮಹಿಳೆಯರಲ್ಲಿ ಸಂಘಟನೆ, ಅತ್ಮವಿಶ್ವಾಸ ಮತ್ತು ಜ್ಞಾನ ಬೆಳೆಯುತ್ತಿದೆ ಎಂದರು.
ಹಗ್ಗ ಜಗ್ಗಾಟ,ಗೋಣಿ ಚೀಲ ಓಟ ಮತ್ತು ಮಡಿಕೆ ಒಡೆಯುವ ಆಟೋಟ ಸ್ಪರ್ಧೆ ಏರ್ಪಡಿಸಲಾಗಿದ್ದು ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕೇಂದ್ರದ ಸದಸ್ಯರಿಂದ ಉತ್ತಮ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಸುಧಾ ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ಜಾನಕಿ,ಮೇಲ್ವಿಚಾರಕ ಸುಲೇಮಾನ್,ಜ್ಞಾನವಿಕಾಸ ಸಮನ್ವಯಾಧಿಕಾರಿ ಶೋಭಾ,ಸೇವಾಪ್ರತಿನಿಧಿ ಶ್ರೀಮತಿ ಮತ್ತು ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

-ಸಂದೀಪ ಯು.ಎಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ