ಚಿಕ್ಕಬಳ್ಳಾಪುರ:ಜಿಲ್ಲೆಯ ಕರ್ನಾಟಕ ಲೋಕಾಯುಕ್ತ, ಪೊಲೀಸ್ ಅಧೀಕ್ಷಕರು ಅವರು ಗೌರಿಬಿದನೂರು ತಾಲ್ಲೂಕಿಗೆ ಸಂಬಂಧಪಟ್ಟಂತೆ ಸಾರ್ವಜನಿಕರ ಕುಂದು ಕೊರತೆಗಳ ಸಭೆಯನ್ನು ಜನವರಿ 10 (ಬುಧವಾರ)ರಂದು ಬೆಳಿಗ್ಗೆ 11:00 ಗಂಟೆಗೆ ಗೌರಿಬಿದನೂರು ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡದೆ ವಿಳಂಬ/ನಿರ್ಲಕ್ಷ್ಯ ಮಾಡುತ್ತಿದ್ದಲ್ಲಿ ಮತ್ತು ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಅಕ್ರಮಗಳನ್ನು ನಡೆಸಿ ಹಣ ದುರುಪಯೋಗಪಡಿಸಿದ್ದಲ್ಲಿ ಆ ಬಗ್ಗೆ ಸಾರ್ವಜನಿಕರು ನಿರ್ದಿಷ್ಟ ಮಾಹಿತಿಯೊಂದಿಗೆ ಸದರಿ ಸಭೆಗೆ ಹಾಜರಾಗಿ ಅವರ ದೂರು ಅರ್ಜಿ ಹಾಗೂ ಸಂಬಂಧಪಟ್ಟ ದಾಖಲೆಗಳನ್ನು ನೀಡಬಹುದೆಂದು ಚಿಕ್ಕಬಳ್ಳಾಪುರ ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಡಾ||ರಾಮ್ ಎಲ್ ಅರಸಿದ್ಧಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.