ಶಿವಮೊಗ್ಗ: ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರಲು ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗದ ವತಿಯಿಂದ 150 ಬಸ್ಸುಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗಿದೆ. ಈ ಹಿನ್ನೆಲೆ ಜ.12ರಂದು ಜಿಲ್ಲೆ ವ್ಯಾಪ್ತಿಯಲ್ಲಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳು ವ್ಯತ್ಯಯವಾಗಲಿದ್ದು ಪ್ರಯಾಣಿಕರು, ವಿದ್ಯಾರ್ಥಿಗಳು ಸಹಕರಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪ್ರಕಟಣೆಯಲ್ಲಿ ತಿಳಿಸಿದೆ.
