ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ

ಗುಂಡ್ಲುಪೇಟೆ:ಪಟ್ಟಣದ ನಿರ್ಮಲ ಕಾನ್ವೆಂಟ್ ನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ,ವಕೀಲರ ಸಂಘ ಹಾಗೂ ನಿರ್ಮಲ‌ ಕಾನ್ವೆಂಟ್ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ರಾಷ್ಟ್ರೀಯ ಯುವ ದಿನಚಾರಣೆಯನ್ನಾಗಿ ಪ್ರಮುಖವಾಗಿ ಶಾಲೆ ಕಾಲೇಜಿನಲ್ಲಿ ಆಚರಣೆ ಮಾಡಿಕೊಂಡು ‌ಬರಲಾಗುತ್ತಿದೆ,
ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬುವುದು ಸರ್ವಕಾಲಕ್ಕೂ ನೆನೆಯುವ ಯುವಕರನ್ನ ಒಳ್ಳೆಯ ಕೆಲಸಗಳಿಗೆ ಬಡಿದೆಚ್ಚರ ಮಾಡುವ ವಾಕ್ಯವಾಗಿದೆ ಹೀಗೆ ಇಂತಹ ಹಲವು ಕೊಡುಗೆಗಳಿಂದ ಅವರ ಸ್ಮರಣಾರ್ಥ ಅವರ ಕೊಡುಗೆ ಸೇವೆಗಳ ನೆನಪಿಗಾಗಿ ಸದಾ ಸ್ಪೂರ್ತಿಯಾಗಿರಲು ಅವರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನ ಎಂದು ಆಚರಣೆ ಮಾಡುತ್ತಾರೆಇವರು ಧರ್ಮ,ತತ್ವಶಾಸ್ತ್ರ,ಕಲೆ,ಇತಿಹಾಸ ಸೇರಿದಂತೆ ಎಲ್ಲಾ ವಿಷಯಗಳನ್ನು ಬಲ್ಲವರಾಗಿದ್ದರು ಎಂದು ‌ಹೇಳಿದರು.

ಯುವಕರಿಗೆ ಹೆಚ್ಚಿನ ಆದ್ಯತೆ ನೀಡುತಿದ್ದ ಇವರು ಯುವಕರು ಯಾವುದರಲ್ಲೂ ಕಡಿಮೆ ಇಲ್ಲ ಯುವಕರು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸುವ ಇಚ್ಛಾಶಕ್ತಿಯುಳ್ಳ ಯುವ ಜನಾಂಗವನ್ನು ಸಶಕ್ತ ರಾಷ್ಟ್ರ ನಿರ್ಮಾಣ ಮಾಡಲು ಬಳಸಿಕೊಳ್ಳಬಹುದು ಎಂದು ಹೇಳುತಿದ್ದರು ಎಂದರು.

ಅಮೆರಿಕಾದ ಚಿಕಾಗೋನಲ್ಲಿ ನಡೆದ ಧರ್ಮ ಸಮ್ಮೇಳನದಲ್ಲಿ ಹಿಂದೂ ಧರ್ಮದ ಆಚಾರ ವಿಚಾರ ಮತ್ತು ಸಂಪ್ರದಾಯಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ತಿಳಿಸಿ ಎಲ್ಲಾ ಧರ್ಮಗಳಿಗಿಂತ ಹಿಂದೂ ಧರ್ಮಕ್ಕೆ ‌ತನ್ನದೆ ಆದ ಹಿನ್ನೆಲೆಯಿದೆ ಎಂದು ಸಾರಿದ ಸಂತ ಸ್ವಾಮಿ ವಿವೇಕಾನಂದರು ಭಾರತಕ್ಕೆ ಮಾತ್ರವಲ್ಲದೆ ಪ್ರಪಂಚದ ಇತರ ದೇಶಗಳಿಗೂ ಸಹ ಅವರ ತತ್ವಗಳು ಬದುಕಿದ ಹಾದಿ ಯುವಜನತೆಗೆ ಪೂರ್ತಿದಾಯಕ ಎಂದು ತಿಳಿಸಿದರು.

ಬಲಿಷ್ಠ ಭಾರತ ಕಟ್ಟಲು ಮಾನಸಿಕವಾಗಿ ಮತ್ತು ದೈಹಿಕವಾಗಿ ಸಮರ್ಥ ಯುವ ಪಡೆಯನ್ನು ಕಟ್ಟುವ ನಿಟ್ಟಿನಲ್ಲಿ ಸ್ವಾಮಿ ವಿವೇಕಾನಂದರು ಯುವಕರಿಗೆ ಮೊದಲ ಪ್ರಾಶಸ್ತ್ಯ ನೀಡುತಿದ್ದರು ಹಾಗಾಗಿ ಇವರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನಚಾರಣೆಯನ್ನು ಆಚರಣೆ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್. ಸಿ ನ್ಯಾಯಾಧೀಶರು ‌ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯರಾದ ಶಿವಕುಮಾರ್.ಜಿ.ಜೆ,ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ಟಿ.ಎಸ್ ವೆಂಕಟೇಶ್ ಮತ್ತು ನಿರ್ಮಲ‌ ಕಾನ್ವೆಂಟಿನ ಸಹ ಶಿಕ್ಷಕರಾದ ಸಿಸ್ಟರ್ ಸ್ವೀಡಲ್ ಉಪಸ್ಥಿತರಿದ್ದರು.

ವರದಿ ಗುಂಡ್ಲುಪೇಟೆ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ