ಕಾರವಾರ:ಕೂರ್ಮಗಡ ನರಸಿಂಹ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಕಾರವಾರ ಉಪವಿಭಾಗಾಧಿಕಾರಿ ಕನಿಷ್ಕ್ ಅಧ್ಯಕ್ಷತೆಯಲ್ಲಿ ಸಾರ್ವಜನಿಕರು,ಅಧಿಕಾರಿಗಳ ಜಾತ್ರಾ ಪೂರ್ವಭಾವಿ ಸಭೆ ನಡೆಯಿತು.ಸಭೆಯಲ್ಲಿ 10 ವರ್ಷದೊಳಗಿನ ಹಾಗೂ 70 ವರ್ಷ ಮೇಲ್ಪಟ್ಟವರಿಗೆ ಜಾತ್ರೆಗೆ ಭೇಟಿ ನೀಡುವುದನ್ನು ನಿರ್ಬಂಧಿಸಲು ಸೂಚಿಸಲಾಗಿದೆನ್ನಲಾಗಿದೆ.
ಕಾರವಾರದ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಉಪವಿಭಾಗಾಧಿಕಾರಿ,ಕೂರ್ಮಗಡ ದ್ವೀಪದ ನರಸಿಂಹ ದೇವರ ಜಾತ್ರೆಗೆ ತೆರಳುವ ಭಕ್ತರಿಗೆ ಪೊಲೀಸರು,ತಹಸೀಲ್ದಾರರು ಅಗತ್ಯ ಲೈಫ್‌ಜಾಕೀಟ್ ವ್ಯವಸ್ಥೆಯನ್ನು ಮಾಡಿ ಪ್ರತಿಯೊಬ್ಬ ಪ್ರಯಾಣಿಕರು ಧರಿಸುವಂತೆ ಸೂಚಿಸಬೇಕು.ಕೂರ್ಮಗಡ ದ್ವೀಪಕ್ಕೆ ತೆರಳುವ ಬೋಟ್‌ಗಳು ಮೊದಲೇ ಮೀನುಗಾರಿಕಾ ಇಲಾಖೆಯ ಅನುಮತಿಯನ್ನು ಪಡೆದುಕೊಳ್ಳಬೇಕು ಎಂದು ಸೂಚಿಸಿದರು.
ಬೈತಖೋಲ್ ಬಂದರಿನಿಂದ ಮಾತ್ರ ಬೋಟ್‌ಗಳು ಹೋಗಲು ಅವಕಾಶ ನೀಡಲಾಗಿದೆ.ಬೇರೆಡೆಯಿಂದ ಹೋಗುವಂತಿಲ್ಲ ಪೊಲೀಸರು ಈ ನಿಟ್ಟಿನಲ್ಲಿ ಕ್ರಮವಹಿಸಬೇಕು.ಜ.25ರಂದು ಜಾತ್ರೆಯ ದಿನ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಮಾತ್ರ ಬೈತಖೋಲ್‌ದಿಂದ ಜಾತ್ರೆಗೆ ತೆರಳಲು ಭಕ್ತರಿಗೆ ಅವಕಾಶವಿದೆ.ಸಂಜೆ 6 ಗಂಟೆಯ ಒಳಗೆ ಅಲ್ಲಿಂದ ವಾಪಸ ಹೊರಡಬೇಕು ಮದ್ಯ ಸೇವನೆ ಮಾಡಿಕೊಂಡು ಹೋಗಲು,ತೆಗೆದುಕೊಂಡು ಹೋಗಲು ಅವಕಾಶವಿಲ್ಲ. ಪೊಲೀಸರು ಕಟ್ಟುನಿಟ್ಟಾಗಿ ಇಂತವರನ್ನು ತಡೆಯಬೇಕು ಎಂದು ಸೂಚಿಸಿದರು.
ಈ ಸಭೆಯಲ್ಲಿ
ತಹಸೀಲ್ದಾರ್ ನಿಶ್ಚಲ್ ನರೋನ್ಹ,ಡಿವಾಯ್‌ಎಸ್‌ಪಿ ವ್ಯಾಲೆಂಟೈನ್ ಡಿಸೋಜಾ,ಕಾರವರ ಸಿಪಿಐ ರಮೇಶ ಹೂಗಾರ,ಕದ್ರಾ ಸಿಪಿಐ ಪ್ರಕಾಶ ದೇವಾಡಿಗ,ಬಂದರು ಇಲಾಖೆಯ ಸುರೇಶ ಶೆಟ್ಟಿ,ನಗರ ಸಂಚಾರಿ,ಚಿತ್ತಾಕುಲ ಠಾಣೆಯ ಪಿಎಸ್‌ಐಗಳು,ಮುಖಂಡರು ಉಪಸ್ಥಿತರಿದ್ದರು.
ವರದಿ-ಎಸ್ ಆರ್ ಭೋವಿ