ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಿಜಗುಣಯ್ಯ ಹೆಚ್ಎಸ್ ಇವರಿಗೆಜ್ಯೋತಿ ಬಾ ಪುಲೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ತುಮಕೂರು:ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಘಟಕ ವಿಜಯಪುರ ಇಲ್ಲಿ ಸಾವಿತ್ರಿಬಾಯಿ ಫುಲೆ ಜಯಂತೋತ್ಸವ ಹಾಗೂ ಜಿಲ್ಲಾ ಶೈಕ್ಷಣಿಕ ಸಮಾವೇಶದಲ್ಲಿ ಕೊಡಮಾಡುವ ರಾಜ್ಯ ಮಟ್ಟದ ಜ್ಯೋತಿ ಬಾ ಪುಲೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ನಿಜಗುಣಯ್ಯ ಹೆಚ್ಎಸ್,ಪ್ರೌಢಶಾಲಾ ಶಿಕ್ಷಕರು ಮತ್ತು ಕವಿ ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿ
ಸಮಾಜ ಕಲ್ಯಾಣ ಇಲಾಖೆಯ ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ನೊಣವಿನಕೆರೆ ತಿಪಟೂರು ತಾ ತುಮಕೂರು ಜಿಲ್ಲೆ ಇವರು ಪಡೆದಿದ್ದಾರೆ.
ಇವರ ಮೂಲ ಹುಲ್ಲೇಕೆರೆ ಗ್ರಾಮದ ದಂಡಿನಶಿವರ ಹೋಬಳಿ ತುರುವೇಕೆರೆ ತಾಲ್ಲೂಕು ತುಮಕೂರು ಜಿಲ್ಲೆಯವರು ಇವರನ್ನು ಇವರು ನೀಡಿರುವ ಶಾಲಾ ಮಟ್ಟ ತಾಲ್ಲೂಕು ಮಟ್ಟ ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ಶೈಕ್ಷಣಿಕ ಸೇವೆಯನ್ನು ಗುರುತಿಸಿ ಆಯ್ಕೆ ಮಾಡಲಾಗಿದ್ದು 21-01-2024 ರಂದು ವಿಜಯಪುರದಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ಗಣ್ಯರ ಅಮೃತ ಹಸ್ತದಿಂದ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ರಾದ ಜಿ ಎಸ್ ಕಾಂಬಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದಕ್ಕಾಗಿ ಅವರಿಗೆ ಅವರ ಸಮಸ್ತ ಸ್ನೇಹ ಬಳಗ ಶಿಕ್ಷಕ ಬಳಗ ಹಾಗೂ ವಿದ್ಯಾರ್ಥಿ ಬಳಗ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ