ಬಾಗಲಕೋಟೆ:ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಜರುಗಿದ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಸಿರಿಧಾನ್ಯಗಳು ಅದ್ಭುತ ಆಹಾರ ಅವುಗಳನ್ನು ಬಳಸಿ ಆರೋಗ್ಯ ಸಿರಿಯನ್ನುಹೆಚ್ಚಿಸಿಕೊಳ್ಳಿ ಎಂಬ ಅಮೂಲ್ಯವಾದ ಪ್ರಬಂಧವನ್ನು ಮಂಡಿಸಿ ನಿರ್ಣಾಯಕರ ಮೆಚ್ಚುಗೆಗೆ ಪಾತ್ರವಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜಿಲ್ಲೆಯ ಬಾಗಲಕೋಟ ತಾಲೂಕಿನ ಶ್ರೀ ಸಿದ್ದೇಶ್ವರ ಪ್ರೌಢಶಾಲೆ ಶಿರೂರ ನ ವಿದ್ಯಾರ್ಥಿನಿಯರಾದ ಕುಮಾರಿ ಸಹನಾ ಎಸ್ ಕೊಣ್ಣೂರ ಹಾಗೂ ಕುಮಾರಿ ರೇಣುಕಾ ವಾಯ್ ಹಿರೇಕುಂಬಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಕ್ಕಾಗಿ ಸೇಡಂನ ಶ್ರೀಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸಂರಕ್ಷಕ ರಾ ದ ಮಾಜಿ ರಾಜ್ಯಸಭಾ ಸದಸ್ಯ ಬಸವರಾಜ್ ಪಾಟೀಲ್ ಸೇಡಂ ಅವರಿಂದ ಬಹುಮಾನ ಸ್ವೀಕರಿಸಿದರು ಇವರಿಗೆ ಮಾರ್ಗದರ್ಶನ ಮಾಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಗೊಳ್ಳಲು ಕಾರಣೀಭೂತರಾದ ಶಿರೂರು ಸಿದ್ದೇಶ್ವರ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾದ ಸಂಜಯ್ ನಡುವಿನಮನಿ ಮಾರ್ಗದರ್ಶನ ಮಾಡಿದ್ದಾರೆ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶನ ಮಾಡಿದ ಶಿಕ್ಷಕರಿಗೆ ಸಿದ್ದೇಶ್ವರ ಪ್ರೌಢಶಾಲೆಯ ಮುಖ್ಯ ಗುರುಗಳು ಹಾಗೂ ಸಮಸ್ತ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.