ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭದ್ರಾವತಿಯಲ್ಲಿ ತಹಶೀಲ್ದಾರ್ ಕೆ ಆರ್ ನಾಗರಾಜ್ ಧ್ವಜಾರೋಹಣ

ಭದ್ರಾವತಿ:ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ 75ನೇ ಗಣ ರಾಜ್ಯೋತ್ಸವದ ಅಂಗವಾಗಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕೆ ಆರ್ ನಾಗರಾಜ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ,ಗೌರವ ಧ್ವಜ ವಂದನೆ ಸ್ವೀಕರಿಸಿ,ಗಣರಾಜ್ಯೋತ್ಸವ ಸಂದೇಶ ನೀಡಿದರು.
ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಬಿ ಕೆ ಸಂಗಮೇಶ್ವರ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ ಆಶಯದಂತೆ ಸರ್ವರಿಗೂ ಸಮಬಾಳು – ಸರ್ವರಿಗೂ ಸಮಪಾಲು ಹಾಗೂ ಸಮಾನತೆ ದೊರೆಯಬೇಕು. ಎಲ್ಲಾ ವರ್ಗದ ಮಕ್ಕಳಿಗೂ ಶಿಕ್ಷಣ ದೊರೆಯುವಂತಾಗಬೇಕು. ಹೊತ್ತು ಕಳೆದರಾಯಿತು, ಮುತ್ತು ಒಡೆದರೆ ಹೋಯಿತು ಎಂಬ ನಾಣ್ಣುಡಿಯಂತೆ ಸಮಯಕ್ಕೆ ಹೆಚ್ಚಿನ ಮಹತ್ವ ನೀಡಿ ಸರ್ವರೂ ವಿದ್ಯಾವಂತರಾಗಬೇಕು ಎಂದು ಕರೆ ನೀಡಿದರು.
ದೇಶದ ಅತ್ಯಂತ ಶ್ರೇಷ್ಠ ಸಂಸತ್ ಭವನ ಉದ್ಘಾಟನೆ ಹಾಗೂ ಐತಿಹಾಸಿಕ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ರಾಷ್ಟ್ರಪತಿಯವರಿಗೆ ಆಹ್ವಾನಿಸದೇ ಇರುವುದು ದಲಿತರಿಗೆ ಅನ್ಯಾಯ ಮಾಡಲಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಕೊಟ್ಟ ಮಾತಿನಂತೆ ಎಂ ಪಿ ಎಂ ಕಾರ್ಖಾನೆಯನ್ನು 6 ತಿಂಗಳಲ್ಲಿ ಖಾಸಗಿಯಾಗಿ ಆರಂಭಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರಿಂದ ಉದ್ಘಾಟನೆ ನೆರವೇರಿಸಲಾಗುವುದು. ಶೀಘ್ರದಲ್ಲೇ ಹೊಸಮನೆ ಪೋಲೀಸ್ ಠಾಣೆ, ಭದ್ರಾಕಾಲೋನಿ ನೂತನ ಸರ್ಕಾರಿ ಆಸ್ಪತ್ರೆ ಲೋಕಾರ್ಪಣೆ ಮಾಡಲಿದ್ದೇವೆ ಎಂದು ತಿಳಿಸಿದರು.ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್,ನಗರ ಸಭಾ ಸದಸ್ಯರುಗಳಾದ ಚನ್ನಪ್ಪ,ಅನುಪಮಾ ಚನ್ನೇಶ,ಟಿಪ್ಪು ಸುಲ್ತಾನ್, ಶಶಿಕಲಾ ನಾರಾಯಣಪ್ಪ,ಮಾಜಿ ಸದಸ್ಯ ಬದ್ರಿನಾರಾಯಣ,ಪೌರಾಯುಕ್ತ ಚನ್ನಪ್ಪನವರ್, ಗ್ರೇಡ್ 2 ತಹಶೀಲ್ದಾರ ರಂಗಮ್ಮ,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ಡಿ ವೈ ಎಸ್ ಪಿ ಕೆ ಆರ್ ನಾಗರಾಜ್,ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್, ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಕಾಶ್, ಡಾ. ವಾಸು ಪಂಡಿತ್, ನಗರ ಕಾಂಗ್ರೆಸ್ ಅಧ್ಯಕ್ಷ ಎಸ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್. ರವಿಕುಮಾರ್ ಮುಂತಾದವರು ಉಪಸ್ಥಿತರಿದ್ದರು.
ಬಸವೇಶ್ವರ ಧರ್ಮಸಂಸ್ಥೆ ಅಧ್ಯಕ್ಷ ಶಿವಕುಮಾರ್, ಎ ಎಸ್ ಐ ದಿವಾಕರ್, ಡಾ. ರಶ್ಮಿ, ಶಶಿಕುಮಾರ್, ಜಹೀರ್ ಖಾನ್
ಹರೀಶ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 70 ಮಂದಿಗೆ ಸನ್ಮಾನಿಸಿ ಗೌರವಿಸಲಾಯಿತು. ಕ್ಷೇತ್ರ ಶಿಕ್ಷಾಧಿಕಾರಿ ಎ ಕೆ ನಾಗೇಂದ್ರಪ್ಪ ಸ್ವಾಗತಿಸಿದರು. ಅಪೇಕ್ಷಾ ಮಂಜುನಾಥ್ ನಿರೂಪಿಸಿದರು. ಸುಮಾ ಕಾರಂತ್ ಮತ್ತು ತಂಡದವರಿಂದ ನಾಡಗೀತೆ.
ಪೆರೇಡ್ ಕಮಾಂಡರ್ ಹಳೇನಗರ ಠಾಣೆಯ ಪಿಎಸ್ಐ ಶ್ರೀಶೈಲ ಕೆಂಚಣ್ಣ ನವರ್ ಮುಂದಾಳತ್ವದಲ್ಲಿ ಆರ್ ಎ ಎಫ್, ಸಿವಿಲ್ ಪೋಲಿಸ್,ಪುರುಷ ಹಾಗೂ ಮಹಿಳಾ ಗೃಹರಕ್ಷಕರ ತಂಡ ಸೇರಿದಂತೆ ಹಲವು ಶಾಲಾ ವಿದ್ಯಾರ್ಥಿಗಳ ತಂಡದಿಂದ ಪಥಸಂಚಲನ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಜನ್ನಾಪುರದ ವಾಣಿ ಕಲಾ ತಂಡದ ಮುಖ್ಯಸ್ಥರಾದ ಸೋಮುರವರ 34 ಜನರ ತಂಡದಿಂದ ಅದ್ಭುತವಾದ ವೀಣಾವಾದನ ನೆರೆದಿದ್ದವರ ಮನಸೂರೆಗೊಂಡಿತು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

ವರದಿ:ಕೆ ಆರ್ ಶಂಕರ್ ಭದ್ರಾವತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ