ಬಾಗಲಕೋಟೆ:ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬಾಗಲಕೋಟೆ ಇವರು ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ 31ನೆಯ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಬಾಲವಿಜ್ಞಾನಿಯಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿರುವ ಬಾಗಲಕೋಟೆ ತಾಲೂಕಿನ ಶಿರೂರು ಪಟ್ಟಣದ ಶ್ರೀ ಸಿದ್ದೇಶ್ವರ ಪ್ರೌಢಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿಯರಾದ ಕುಮಾರಿ ಸಹನಾ ಕೊಣ್ಣೂರ್ ಹಾಗೂ ಕುಮಾರಿ ರೇಣುಕಾ ಹಿರೇಕುಂಬಿ ಇವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಗೂ ಕರ್ನಾಟಕ ಸರ್ಕಾರದ ಅಬಕಾರಿ ಸಚಿವರಾದ ಶ್ರೀ ಆರ್ ಬಿ.ತಿಮ್ಮಾಪುರ ಸಾಹೇಬರು ಸನ್ಮಾನಿಸಿ ಗೌರವಿಸಿದರು.ಈ ವಿದ್ಯಾರ್ಥಿನಿಯರಿಗೆ ಮಾರ್ಗದರ್ಶನವನ್ನು ವಿಜ್ಞಾನ ಶಿಕ್ಷಕರಾದ ಸಂಜಯ ನಡುವಿನಮನಿ ಯವರು ಮಾಡಿದ್ದರು,ಕಾರ್ಯಕ್ರಮದಲ್ಲಿ ಶಾಸಕ ಎಚ್ ವೈ ಮೇಟಿ ಸಂಸದರಾದ ಪಿ ಸಿ ಗದ್ದಿಗೌಡರ್ ಹಾಗೂ ಜಿಲ್ಲೆಯ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳು ಮತ್ತು ಜಿಲ್ಲಾಧಿಕಾರಿಗಳಾದ ಶ್ರೀಮತಿ ಜಾನಕಿ ಕೆ ಎಂ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಶಿಧರ್ ಕುರೇರ್ ಉಪ ವಿಭಾಗ ಅಧಿಕಾರಿಗಳಾದ ಸನ್ಮಾನ್ಯ ಶ್ರೀಮತಿ ಶ್ವೇತಾ ಬಿಡಿಕರ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಿ ಕೆ ನಂದನೂರ್ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ ಎಸ್ ಬಡದಾನಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪುರ ವಿಜ್ಞಾನ ವಿಷಯ ಪರಿವೀಕ್ಷಕ ಎಂ ಎ ಬಾಳಿಕಾಯಿ ಮತ್ತು ಅಧಿಕಾರಿ ವರ್ಗದವರು ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.
