ಬೀದರ್:ನಿನ್ನೆ ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರಧ್ವಜಾರೋಹಣನೆರವೇರಿಸಿ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅರಣ್ಯ,ಜೈವಿಕ ಮತ್ತು ಪರಿಸರ ಹಾಗೂ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಈಶ್ವರ್ ಖಂಡ್ರೆ ಅವರು ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ ಸರ್ವರಿಗೂ ಸಮಾನತೆ,ಸಮಪಾಲು ಹಾಗೂ ಸಮಬಾಳು ನೀಡಿದೆ ಪ್ರಜಾಪ್ರಭುತ್ವ ವ್ಯವಸ್ಥೆ 75 ವರ್ಷವಾದರೂ ಗಟ್ಟಿಯಾಗಿ ನಿಲ್ಲಲು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶಕ್ಕೆ ಕೊಟ್ಟ ಬೃಹತ್ ಲಿಖಿತ ಸಂವಿಧಾನವೇ ಕಾರಣವಾಗಿದೆ,
ಸಂವಿಧಾನಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನ ಇಡೀ ಜಗತ್ತಿನಲ್ಲಿಯೇ ಅತಿದೊಡ್ಡ ಸಂವಿಧಾನ ವಾಗಿವೆ. ಅಲ್ಲದೇ ಜಗತ್ತಿಗೆ.ಮಾದರಿಯಾಗಿದೆ ವಿಶ್ವದಲ್ಲಿಯೇ ಮಹಿಳೆಯರಿಗೆ ಮತದಾನ ಹಕ್ಕು ನೀಡಿರುವುದು ನಮ್ಮ ದೇಶವಾಗಿದೆ ಎಂದು ಹೇಳಿದರು.
ಭಾರತವು ವಿವಿಧತೆಯಲ್ಲಿ
ಏಕತೆ ಹೊಂದಿದ ರಾಷ್ಟ್ರವಾಗಿದೆ 29ರಾಜ್ಯಗಳು, 1618ಭಾಷೆಗಳು,6400 ಪಂಗಡಗಳು
ವಿವಿಧ ಮಹತ್ವದ ಹಬ್ಬ ಹರಿದಿನಗಳನ್ನು ಹೊಂದಿರುವ ಏಕೈಕ ರಾಷ್ಟ್ರ ಭಾರತವಾಗಿದೆ.
ಆದರೆ ಇಂದು ಜಾತಿ ಧರ್ಮದ ಹೆಸರಿನಲ್ಲಿ
ನಮ್ಮಲಿಯೇ ಭಿನ್ನತೆ ಹುಟ್ಟಿಸಲಾಗುತ್ತಿದೆ.
ಭಾರತೀಯ ಜನರ ಮುಗ್ಧತೆಯನ್ನು ದುರುಪ
ಯೋಗ ಪಡಿಸಿಕೊಂಡು ಒಡೆದಾಳುವ ಬಗ್ಗೆ ಜನತೆ ಜಾಗೃತರಾಗಬೇಕಾಗಿದೆ
ಎಂದು ಹೇಳಿದರು.
ನಾನು ಈ ಹಿಂದೆಯೂ,ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದಾಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದೆ ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗುವುದು ನನ್ನ ಗುರಿಯಾಗಿದೆ.
ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಶೀಘ್ರದಲ್ಲಿ ಜಿಲ್ಲಾಡಳಿತ ಕಾರ್ಯರಂಭ ಮಾಡುತ್ತದೆ ಗೋದಾವರಿ ನದಿ ನೀರಿನ ಸದ್ಬಳಕೆಗಾಗಿ ಯೋಜನೆಗಳನ್ನು ಹಾಕಿಕೊಳ್ಳಲಾಗುತ್ತದೆ.ಕಾರಂಜಾದಿಂದ ಇನ್ನೂ ಹೆಚ್ಚುವರಿಯಾಗಿ 50ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರು ಹರಿಸಲು ಯೋಜನೆ ‘ರೂಪಿಸಲಾಗುತ್ತದೆ ಎಂದು ಈಶ್ವರ ಖಂಡ್ರೆ ಭರವಸೆ ನೀಡಿದರು.
ಬರುವ ಮಾರ್ಚ ಅಂತ್ಯದೊಳಗಾಗಿ ಜಿಲ್ಲಾ ‘ಆಸ್ಪತ್ರೆಯಲ್ಲಿ ಕ್ಯಾಥ್ ಲ್ಯಾಬ್ ಆರಂಭಗೊಳಿಸುವ ಮೂಲಕ ರೋಗಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಗುರಿಯಿದೆ.ಬೀದರ್‌ನ ಮಹಿಳಾ ಪದವಿ ಮಹಾವಿದ್ಯಾಲಯಕ್ಕೆ 100ಕೋಟಿ ರೂ.ಅನುದಾನ ಬಿಡುಗಡೆ ಮಾಡಲಾಗಿದೆ ಹೀಗೆ ಹಲವಾರು ಸರಕಾರದ ಯೋಜನೆಗಳ ಬಗ್ಗೆ ಮಾತನಾಡಿದರು.
ಈ ಸಂಧರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ನೀಡಿ ಸತ್ಕರಿಸಲಾಯಿತು.ಸಚಿವರಾದ ಈಶ್ವರ ಖಂಡ್ರೆ, ರಹೀಮ್ ಖಾನ್,ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಎಂ ಎಲ್ ಸಿ ಗಳಾದ ರಘುನಾಥರಾವ ಮಲ್ಕಾಪುರೆ, ಅರವಿಂದಕುಮಾರ ಅರಳಿ,ನಗರಸಭೆ ಅಧ್ಯಕ್ಷ ಮಹ್ಮದ್ ಗೌಸೊದ್ದೀನ್,ಡಿಸಿ ಗೋವಿಂದರಡ್ಡಿ,ಜಿಪಂ ಸಿಇಒ ಡಾ.ಗಿರೀಶ್ ಬದೋಲೆ,ಎಸ್‌ಪಿ ಚನ್ನಬಸವಣ್ಣ ಲಂಗೋಟಿ ಇದ್ದರು.
ವರದಿ:ಚಂದ್ರಕಾಂತ ಝಬಾಡೆ