ಮಹಾಪುರುಷರಾದ ಮಡಿವಾಳ ಮಾಚಿದೇವರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶವನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕುಎಂದು ಶಾಸಕ ಮಂಜುನಾಥ್ ತಿಳಿಸಿದರು.
ಹನೂರು:ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದ ಸಭಾಂಗಣದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮವನ್ನು
ಆಯೋಜಿಸಲಾಗಿತ್ತು.ಈ ವೇಳೆ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಬಳಿಕ ಮಾತನಾಡಿದ ಅವರು ಮಡಿವಾಳ ಮಾಚಿದೇವರು ಬದುಕಿನ ಸಾತ್ವಿಕತೆ ನೀಡಿ ಸತ್ಯ,ಶುದ್ಧ ಕಾಯಕ ಕೊಟ್ಟವರಾಗಿದ್ದಾರೆ.ಸಮಾಜದಲ್ಲಿ ಜಾತಿ ಮುಖ್ಯವಲ್ಲ ಜೀವನ ಮುಖ್ಯ ಎಂದು ತೋರಿಸಿಕೊಟ್ಟಿದ್ದಾರೆ ಅಂತಹ ಮಹಾಪುರಷನ ಆದರ್ಶಗಳನ್ನು ಪ್ರತಿಯೊಬ್ಬರೂ ಕೂಡಾ ಅಳವಡಿಸಿಕೊಳ್ಳಬೇಕು ಹಾಗೂ ಮೌಢ್ಯಗಳಿಂದ ದೀನರ ಶೋಷಣೆ ನಡೆಯುತ್ತಿದ್ದ ಕಾಲದಲ್ಲಿ ಮಾಚಿದೇವ ಜಾಗೃತಿಯ ಮೂಲಕ ಶೋಷಣೆ ತಡೆಗಟ್ಟಿದರು ಕಷ್ಟಗಳನ್ನು ಸಹಿಸಿಯೂ ಬಡ ಜನರ ಉದ್ಧಾರಕ್ಕೆ ಮಾರ್ಗದರ್ಶಕರಾಗಿದ್ದರು ಎಂದರು ಹಾಗಯೇ ಹನೂರು ಕ್ಷೇತ್ರದ ಮಡಿವಾಳ ಸಮುದಾಯ ಏಳ್ಗೆಗೆ ಶ್ರಮಿಸುತ್ತೇನೆ ಶೀಘ್ರವೇ ಹನೂರು ಪಟ್ಟಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಕೂಡಿಸಲು ಮುಂದಾಗುತ್ತೇನೆ ಎಂದು ಭರವಸೆ ನೀಡಿದರು.
ಬಳಿಕ ಮಡಿವಾಳ ಸಮುದಾಯದ ತಾಲ್ಲೂಕು ಅದ್ಯಕ್ಷ ವಿಜಯ್ ಮಾತನಾಡಿ 2014ರಿಂದಲ್ಲೂ ನಮ್ಮ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ
ಸೇರಿಸುವಂತೆ ಒತ್ತಾಹಿಸುತ್ತಿದ್ದು ಆದರೆ ಇಂದಿಗೂ ಯಾವುದೇ ಪ್ರಯೋಜನವಾಗಿಲ್ಲ,
ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸುವಂತೆ ಹಾಗೂ ಹನೂರು ಪಟ್ಟಣದ ಕೇಂದ್ರ ಸ್ಥಾನದಲ್ಲಿ ಸಮುದಾಯ ಭವನಕ್ಕೆ,ಹಾಸ್ಟಲ್ ನಿರ್ಮಾಣಕ್ಕೆ ಮುಂದಾಗುವಂತೆ ಕೋರಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು,ಮಡಿವಾಳ ಮಾಚಿದೇವರ ಸಂಘದ , ಕಾರ್ಯದರ್ಶಿ ಕೃಷ್ಣ,ಮುಖಂಡರಾದ ಮೋಹನ್,ಪುಟ್ಟಣ್ಣ,ರಮೇಶಣ್ಣ,ನಂದೀಶ್, ಶಾಂತರಾಜು,ಮಾದೇಶ,ರಾಜಣ್ಣ.ಡಿ.ಆರ್.ಮಾದೇಶ, ಸುರೇಶ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್