ಜೇವರ್ಗಿ:ಸ್ವಾತಂತ್ರ್ಯ ಹೋರಾಟಗಾರ,ಕೆಚ್ಚೆದೆಯ ಗಂಡುಗಲಿ ಬ್ರಿಟಿಷರಿಗೆ ನಡುಕ ಹುಟ್ಟಿಸಿದ ಸಂಗೊಳ್ಳಿ ರಾಯಣ್ಣನವರ ಅಭಿವೃದ್ಧಿ ನಿಗಮ ಜೇವರ್ಗಿ ತಾಲೂಕಿನಲ್ಲಿ ಸ್ಥಾಪಿಸಬೇಕು ಎಂದು ಕನಕ ಕಾರ್ಮಿಕ ಕಲ್ಯಾಣ ಸಂಘದ ಯುವ ಘಟಕದ ರಾಜ್ಯಾಧ್ಯಕ್ಷರಾದ ಮಲ್ಲಣ್ಣ ಎಂ ಪೂಜಾರಿಯವರು ಸಂಬಂಧಪಟ್ಟ ಇಲಾಖೆಯವರಿಗೆ ಹಾಗೂ ಸರ್ಕಾರಕ್ಕೆ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ ಇದಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭೇಟಿಯಾಗಿ ಜೇವರ್ಗಿ ತಾಲೂಕಿನಲ್ಲಿ ಸಂಗೊಳ್ಳಿ ರಾಯಣ್ಣನವರ ಅಭಿವೃದ್ಧಿ ನಿಗಮ ಸ್ಥಾಪಿಸುವ ನಿಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಹೇಳಿದ್ದಾರೆ ಅದೇ ರೀತಿಯಾಗಿ ಜೇವರ್ಗಿ ತಾಲೂಕಿನಲ್ಲಿ ಹಲವಾರು ಅಭಿವೃದ್ಧಿ ನಿಗಮಗಳಿವೆ ಅದೇ ರೀತಿಯಾಗಿ ಸ್ವತಂತ್ರ ಸೇನಾನಿ ಸಂಗೊಳ್ಳಿ ರಾಯಣ್ಣನವರ ಅಭಿವೃದ್ಧಿ ನಿಗಮ ಇಲ್ಲದಿರುವುದು ದುರ್ದೈವದ ಸಂಗತಿ ಈ ಕೂಡಲೇ ಜೇವರ್ಗಿ ತಾಲೂಕಿನಲ್ಲಿ ಸಂಗೊಳ್ಳಿ ರಾಯಣ್ಣನವರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಕನಕ ಕಾರ್ಮಿಕ ಕಲ್ಯಾಣ ಸಂಘದ ಯುವ ಘಟಕದ ರಾಜ್ಯಾಧ್ಯಕ್ಷರಾದ ಮಲ್ಲಣ್ಣ ಎಂ ಪೂಜಾರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
