ಕಲಬುರಗಿಯ ನೂತನ ಪೋಲೀಸ್ ವರಿಷ್ಠಾಧಿಕಾರಿಯನ್ನಾಗಿ 2014 ನೇ ವೃಂದದ ಐಪಿಎಸ್ ಅಧಿಕಾರಿ ಶಿವಪ್ರಕಾಶ್ ದೇವರಾಜು ಅವರನ್ನು ವರ್ಗಾವಣೆಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.
ಶಿವಪ್ರಕಾಶ್ ದೇವರಾಜು ಅವರು ಬೆಂಗಳೂರು ದಕ್ಷಿಣ ಸಂಚಾರ ವಿಭಾಗದ ಡಿಸಿಪಿಯಾಗಿದ್ದರು.ಹಾಲಿ ಎಸ್ ಪಿ ಅಡ್ಡೂರು ಶ್ರೀನಿವಾಸಲು ಅವರನ್ನು ಬೆಂಗಳೂರು ದಕ್ಷಿಣ ಸಂಚಾರ ವಿಭಾಗದ ಡಿಸಿಪಿ ಹುದ್ದೆಗೆ ವರ್ಗಾವಣೆಗೊಳಿಸಿ ಅವರ ಜಾಗಕ್ಕೆ ಶಿವಪ್ರಕಾಶ್ ದೇವರಾಜು ಅವರನ್ನು ವರ್ಗಾವಣೆಗೊಳಿಸಲಾಗಿದೆ. ಇನ್ನೂ ಅಡ್ಡೂರು ಶ್ರೀನಿವಾಸಲು ಅವರು ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು ಎಸ್ಪಿ ಅಗುವುದಕ್ಕೂ ಮುನ್ನ ಅಡ್ಡೂರು ಅವರು ಡಿಸಿಪಿಯಾಗಿದ್ದರು.ಹೀಗಾಗಿ, ಲೋಕಸಭೆ ಚುನಾವಣೆ ಮುಗಿಯುವವರೆಗೆ ಚುನಾವಣಾ ಆಯೋಗದ ಸೂಚನೆ ಮೇರೆಗೆ ಜಿಲ್ಲೆಯಿಂದ ಬೇರೆಡೆ ವರ್ಗಾವಣೆಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವರದಿ-ಅಪ್ಪಾರಾಯ ಬಡಿಗೇರ




















