ಯಾದಗಿರಿ:ಕೇಂದ್ರ ಸರ್ಕಾರದ ಬಜೆಟ್ ರೈತರ ಪರ ವಿರೋಧಿ ಬಜೆಟ್ ಇದಾಗಿದೆ ಎಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಣ್ಣಗೌಡ ಹಗರಟಗಿ ಆರೋಪಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಹಲವಾರು ತಾಲೂಕುಗಳಲ್ಲಿ ಬರಗಾಲದಿಂದ ತತ್ತರಿಸಿದ್ದು ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ ರೈತರಿಗೆ ಅನುದಾನ ಬಿಡುಗಡೆ ಮಾಡಿಲ್ಲ ಮತ್ತು ನೀರಾವರಿ ಹಾಗೂ ರೈತರು ಬೆಳೆದ ಬೆಂಬಲ ಬೆಂಬಲ ಬೆಲೆ ಘೋಷಣೆ ಮಾಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದೆ ಎಂದರು.
ಸ್ವಾಮಿನಾಥನ್ ಆಯೋಗದ ವರದಿ ಕೂಡ ಸರಿಯಾಗಿ ಜಾರಿ ಮಾಡಿಲ್ಲ ಕೃಷ್ಣಾ ಮೇಲ್ದಂಡೆ ಯೋಜನೆಯ ಕುರಿತು ಯಾವುದೇ ರೀತಿಯಾದ ಅನುದಾನ ಒದಗಿಸಿಲ್ಲ ಇದರಿಂದ ರೈತರಿಗೆ ತುಂಬಾ ಅನ್ಯಾಯವಾಗಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಕಾರ್ಪೊರೇಟುಗಳ ಬಜೆಟ್, ಉದ್ಯಮಿಗಳ ಬಜೆಟ್ ಆಗಿದೆ ಎಂದು ರಾಜ್ಯ ರೈತ ಸಂಘದ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಣ್ಣಗೌಡ ಹಗರಟಗಿ ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್




















