ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಫೆ.4 ರಂದು ಮಡಿವಾಳ ಮಾಚಿದೇವ ಜಯಂತೋತ್ಸವ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಕಾರ್ಯಕ್ರಮ

ಸೊರಬ:ಶ್ರೀ ಮಾಚಿದೇವ ಮಡಿವಾಳ ಸಂಘದ ವತಿಯಿಂದ ಫೆಬ್ರವರಿ ನಾಲ್ಕರ ಭಾನುವಾರ ಬೆಳಗ್ಗೆ 10 ಗಂಟೆಗೆ ಪುರಸಭೆ ವ್ಯಾಪ್ತಿಯ ಕರಡಿಗೆರೆ ಗ್ರಾಮದಲ್ಲಿ ಮಡಿವಾಳ ಮಾಚಿದೇವ ಜಯಂತೋತ್ಸವ, ಮಡಿವಾಳ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಚಿವ ಮಧು ಬಂಗಾರಪ್ಪನವರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಗುಡ್ಡಪ್ಪ ಕೆ.ಪಿ ತುಮರಿಕೊಪ್ಪ ಹೇಳಿದ್ದಾರೆ.
ಪಟ್ಟಣದಲ್ಲಿ ಕರುನಾಡ ಕಂದ ನ್ಯೂಸ್ ನೊಂದಿಗೆ ಮಾತನಾಡಿದ ಅವರು,ಚಿತ್ರದುರ್ಗ ಗುರುಮಠದ ಡಾ. ಬಸವ ಮಾಚಿದೇವ ಮಹಾ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಚಿವ ಎಸ್ ಮಧು ಬಂಗಾರಪ್ಪ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಗೌರವ ವೇದಿಕೆಯ ಸಲಹೆಗಾರ ಎಚ್ ರವಿಕುಮಾರ್,ಡಾಕಪ್ಪ ರಿಪ್ಪನಪೇಟೆ,ಯೋಗೇಶ್ವರಿ ವಿಜಯ್,ಸದಾಶಿವಪ್ಪ, ಗಣಪತಿ ಎನ್,ಅರುಣ್ ಕುಮಾರ್,ಸಿಪಿ ತುಳುಜಪ್ಪ ಸೇರಿದಂತೆ ಸಮಾಜದ ಪ್ರಮುಖರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು,ಈ ಸಂದರ್ಭದಲ್ಲಿ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಈ ಕಾರ್ಯಕ್ರಮಕ್ಕೆ ಮಾಚಿದೇವ ಮಡಿವಾಳ ಸಮಾಜ ಬಾಂಧವರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡುವಂತೆ ಅವರು ಕೋರಿದ್ದಾರೆ.

ವರದಿ-ಸಂದೀಪ ಯು.ಎಲ್.,ಕರುನಾಡ ಕಂದ ನ್ಯೂಸ್,ಸೊರಬ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ