ನಾಗರಿಕ ಬಂಧುಗಳೇ,
75ನೇ ಗಣರಾಜ್ಯೋತ್ಸವದ (ಅಮೃತ ಮಹೋತ್ಸವ) ಅಂಗವಾಗಿ ಕರ್ನಾಟಕ ಸರ್ಕಾರವು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಂವಿಧಾನದ ಸ್ತಬ್ಧಚಿತ್ರ ಹೋತ್ತ ವಾಹನವು ದಿನಾಂಕ 3/ 2/ 2024 ಶನಿವಾರ ಮಧ್ಯಾಹ್ನ ಒಂದು ಗಂಟೆಗೆ ಇಡಗೂರು ಗ್ರಾಮಕ್ಕೆ(ರುದ್ರ ಕವಿ ಸರ್ಕಲ್) ಆಗಮಿಸುತ್ತಿದ್ದು, ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಮೆರವಣಿಗೆ ಮೂಲಕ ವಿಜೃಂಭಣೆಯಿಂದ ಸ್ವಾಗತಿಸಬೇಕಾಗಿದೆ. ಆದ್ದರಿಂದ ಪಂಚಾಯತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಜನ ಪ್ರತಿನಿಧಿಗಳು, ಎಲ್ಲ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಶ್ರೀ ಶಕ್ತಿ, ಮಹಿಳಾ ಸ್ವಸಹಾಯ ಸಂಘಗಳ ಪ್ರತಿನಿಧಿಗಳು, ಆಶಾ, ಅಂಗನವಾಡಿ ಕಾರ್ಯಕರ್ತರು, ಯುವಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಈ ಮೂಲಕ ಕೋರಲಾಗಿದೆ.
ವರದಿಗಾರ ತುಳಸಿನಾಯಕ್