ದಾವಣಗೆರೆ:ಮುಂದಿನ 2025 ಸಾಲಿನ 39 ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ತುಮಕೂರಿನಲ್ಲಿ ನಡೆಸಲು ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಅವರು ತಿಳಿಸಿದರು.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ,ಜಿಲ್ಲಾ ಸಂಘ ಮತ್ತು ಜಿಲ್ಲಾ ವರದಿಗಾರರ ಕೂಟದಿಂದ ದಾವಣಗೆರೆ ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ 38ನೇ ರಾಜ್ಯಮಟ್ಟದ ಸಮ್ಮೇಳನದ ಎರಡನೇ ದಿನದ ಕಾರ್ಯಕ್ರಮದಲ್ಲಿ ಪ್ರತಿನಿಧಿಗಳ ಸಮಾವೇಶದಲ್ಲಿ ಭಾನುವಾರ ನಡೆಯಿತು.
ಸಮ್ಮೇಳನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿನಿಧಿಗಳ ಸಮಾವೇಶವನ್ನು ಮುಂದಿನ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಕಲ್ಪತರು ನಾಡು ತುಮಕೂರಿನಲ್ಲಿ ನಡೆಸಲು ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಶಿವಾನಂದ ತಗಡೂರು ಅವರು ತಿಳಿಸಿದರು.
ಪತ್ರಕರ್ತರ ಸಮ್ಮೇಳನದಲ್ಲಿ ವಿವಿಧ ಜಿಲ್ಲೆಯ ಪತ್ರಕರ್ತರು ತಮ್ಮ ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿದರು ನಂತರ ಮಾತನಾಡಿದ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು,ಮುಂದಿನ ಸಮ್ಮೇಳನವನ್ನು ನಡೆಸಲು ಮೂರು ಜಿಲ್ಲೆಗಳಿಂದ ಬೇಡಿಕೆ ಬಂದಿದೆ.ತುಮಕೂರು,ಶಿವಮೊಗ್ಗ,ಗಡಿಭಾಗದ ಜಿಲ್ಲೆಯಾದ ರಾಯಚೂರಿನಲ್ಲಿ ಮುಂದಿನ ಪತ್ರಕರ್ತರ ಸಮ್ಮೇಳನ ನಡೆಸಲು ಬೇಡಿಕೆ ಬಂದಿದ್ದು,ಗಡಿ ಜಿಲ್ಲೆಗಳಾದ ಕಲಬುರಗಿ,ಬಿಜಾಪುರ ಮತ್ತು ಕರಾವಳಿಯಲ್ಲೂ ನಾವು ಸಮ್ಮೇಳನ ಮಾಡಿದ್ದೇವೆ. ಹಾಗಾಗಿ ಈ ಬಾರಿ ಮುಂದಿನ ಸಮ್ಮೇಳನವನ್ನು ತುಮಕೂರಿನಲ್ಲಿ ನಡೆಸೋಣ ಎಂದರು.
ಕಾನಿಪ ನಿರ್ಣಯ:
ಮೊದಲ ನಿರ್ಣಯವಾಗಿ ಎಲ್ಲಾ ಕಾರ್ಯನಿರತ ಪತ್ರಕರ್ತರಿಗೂ ಬಸ್ ಪಾಸ್ ನೀಡಬೇಕು ಎಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ ಶಿವಾನಂದ ತಗಡೂರು ಅವರು,ಮುಂದಿನ ಸಮ್ಮೇಳನ ನಡೆಸಲು 50 ಲಕ್ಷ ರೂ ನೀಡಬೇಕು ಎಂಬ ಹಕ್ಕೋತ್ತಾಯವನ್ನು ಮಂಡಿಸಿದರು.ಸಮ್ಮೇಳನದಲ್ಲಿ ಅಚ್ಚುಕಟ್ಟಾಗಿ ಊಟದ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯಲ್ಲಿ ಉತ್ತಮವಾಗಿ ಆಯೋಜನೆ ಮಾಡಿದೆ. ಕಾರ್ಯನಿರತ ಪತ್ರಕರ್ತರ ಜಿಲ್ಲಾ ಸಂಘಕ್ಕೆ ಅಭಿನಂದನಾ ನಿರ್ಣಯ,ಕ್ರಿಕೆಟ್ ಟೂರ್ನಿಯನ್ನು ನಡೆಸಿದ ಮಂಗಳೂರು ಸಂಘಕ್ಕೆ ಅಭಿನಂದನಾ ನಿರ್ಣಯವನ್ನು ಕೈಗೊಂಡರು.
ಇದಲ್ಲದೆ ಪತ್ರಕರ್ತರಿಗೂ ಅರೋಗ್ಯ ಕ್ಷೇಮಾಭಿವೃದ್ಧಿ ಯೋಜನೆಯನ್ನು ಪ್ರಾರಂಭಿಸಬೇಕು,ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರತ ಪತ್ರಕರ್ತರ ಘಟಕ ಸ್ಥಾಪಿಸಬೇಕು,ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ನಿವೇಶನ ನೀಡಬೇಕು,ಪಿಯುಸಿ,ಡಿಗ್ರಿ ಓದುತ್ತಿರುವ ಪತ್ರಕರ್ತರ ಮಕ್ಕಳಿಗೆ ಲ್ಯಾಪ್ ಟ್ಯಾಪ್ ನೀಡಬೇಕು, ಪತ್ರಕರ್ತರು ಮೃತಪಟ್ಟರೆ 2 ಲಕ್ಷ ರೂ ಸಹಾಯ ನೀಡಬೇಕು,ಟೋಲ್‌ನಲ್ಲಿ ಉಚಿತ ಪ್ರವೇಶ ಒದಗಿಸಬೇಕು ಎಂಬ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ರಾಜ್ಯ ಘಟಕದ ಪದಾಧಿಕಾರಿಗಳು ಪ್ರತಿನಿಧಿಗಳ ಸಮಾವೇಶದಲ್ಲಿ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ತುಮಕೂರು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಕಾನಿಪ ರಾಜ್ಯ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.