ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಡಿಜಿಟಲ್ ಗ್ರಂಥಾಲಯ ಗರಡಿ ಮನೆಯಂತಿದೆ:ಶ್ರೀಮತಿ ಆಶಾ ಗುರುಮಾತೆ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ಆರ್ ಎಂ ಕೆ ಶಾಲೆಯ ವಿದ್ಯಾರ್ಥಿಗಳು ಗುರುಮಾತೆ ಶ್ರೀಮತಿ ಆಶಾ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಿಕ್ಷಕಿಯರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಲ್ಲಪ್ಪ ಗುಡ್ಲಾನೂರ್
ಶಾಖಾ ಗ್ರಂಥಾಲಯ ಅಧಿಕಾರಿ ಇವರು ಪಠ್ಯ ಪುಸ್ತಕಗಳ ಜೊತೆಗೆ ಪಠ್ಯೇತರ ಪುಸ್ತಕಗಳನ್ನು ಹಾಗೂ ದಿನ ಪತ್ರಿಕೆಗಳನ್ನು ಮತ್ತು ನಿಯತಕಾಲಿಕೆಗಳನ್ನ ಓದಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕವಿಗಳ,ವಿಜ್ಞಾನಿಗಳ,ಯೋಧರ ಇಡೀ ಜಗತ್ತಿನ ಎಲ್ಲಾ ಗಣ್ಯ ವ್ಯಕ್ತಿಗಳ ಜೀವನ ಚರಿತ್ರೆಗಳನ್ನು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಾದ ಪುಸ್ತಕಗಳನ್ನು ಹಾಗೂ ಸಾಹಿತ್ಯ,ನಾಟಕ, ಕಥೆ,ಕಾದಂಬರಿ ಆಧ್ಯಾತ್ಮ ಹಾಸ್ಯ ಇತರೆ ಪುಸ್ತಕಗಳನ್ನು ಉಚಿತವಾಗಿ ಓದುವುದರ ಜೊತೆಗೆ ಡಿಜಿಟಲ್ ಗ್ರಂಥಾಲಯವನ್ನು ಉಪಯೋಗಿಸಬಹುದು ಇದು ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಡಿಜಿಟಲ್ ಗ್ರಂಥಾಲಯ ಗರಡಿ ಮನೆಯಂತಿದೆ ಎಲ್ಲಾ ವಿದ್ಯಾರ್ಥಿಗಳು,ಗುರುಗಳು,ಗುರು ಮಾತೆಯರು ಹಾಗೂ ಆಡಳಿತ ಮಂಡಳಿಯವರು ಸದಸ್ಯತ್ವವನ್ನು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ವರದಿ-ವೈ.ಮಹೇಶ್ ಕುಮಾರ್ ಕೊಟ್ಟೂರು ತಾಲ್ಲೂಕು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ