ಮುಂಡಗೋಡ:ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನೀಡುವ ಕಾಯಕಲ್ಪ ಪ್ರಶಸ್ತಿಗೆ ನಂದಿಕಟ್ಟಾ ಆರೋಗ್ಯ ಉಪಕೇಂದ್ರ ಭಾಜನವಾಗಿದೆ.ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಅತ್ಯುತ್ತಮ ಉಪ ಕೇಂದ್ರ ಎಂದು ಆಯ್ಕೆಯಾದ ಕಾರಣ ಮೈಸೂರಿನಲ್ಲಿ ನಡೆದ ಸಮಾರಂಭದಲ್ಲಿ ವೈದ್ಯಾಧಿಕಾರಿ ಡಾ.ಭರತ ಡಿ ಟಿ, ಸಮುದಾಯ ಆರೋಗ್ಯ ಅಧಿಕಾರಿ ರೇಖಾ ಎನ್ ವರ್ದಿ ಮಹೇಂದ್ರ ಪಾಟೀಲ್ ಡಿ ವರ್ಗ ಇವರುಗಳು ಪಾಲ್ಗೊಂಡು ಪ್ರಶಸ್ತಿಯನ್ನು ಇಲಾಖೆಯ ಹಿರಿಯ ಅಧಿಕಾರಿಗಳಿಂದ ಪಡೆದಿರುತ್ತಾರೆ.ಜಿಲ್ಲಾ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಕ್ಕೆ ತಾಲೂಕ ಆರೋಗ್ಯಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.