ಹನೂರು:ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಮತ್ತು ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಸಹಯೋಗದೊಂದಿಗೆ ಗಡಿನಾಡು ಕನ್ನಡ ಉತ್ಸವ ಕಾರ್ಯಕ್ರಮ ಮಲೈ ಮಹದೇಶ್ವರ ಬೆಟ್ಟದಲ್ಲಿ ನಡೆಯಿತು.ಈ ಕಾರ್ಯಕ್ರಮದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಎಂ ಆರ್ ಮಂಜುನಾಥ್ ರವರು ಭಾಗವಹಿಸಿ ಮಾತನಾಡಿದರು.
ಸರ್ಕಾರಿ ನೌಕರರ ಸಂಘದ ವತಿಯಿಂದ ಗಡಿನಾಡು ಕನ್ನಡ ಉತ್ಸವ ನನ್ನ ಮತ ಕ್ಷೇತ್ರವಾದ ಮಹದೇಶ್ವರ ಬೆಟ್ಟದಲ್ಲಿ ನಡೆಯುವುದು ಸಂತೋಷ ತಂದಿದೆ.
ಶಿಕ್ಷಕರ ತಂಡ ನನ್ನನ್ನು ಭೇಟಿ ಮಾಡಿ ನಿಮ್ಮ ಬೇಡಿಕೆಯ ಬಗ್ಗೆ ಮನವಿ ಮಾಡಿದ್ದಾರೆ ನಿಮ್ಮ ಬೇಡಿಕೆಗೆ ನನ್ನ ಬೆಂಬಲವಿದೆ ನಾನು ಸನ್ಮಾನ್ಯ ಮುಖ್ಯಮಂತ್ರಿ ರವರಿಗೆ ಪತ್ರ ಬರೆದಿದ್ದೇನೆ ಹಾಗೂ ನಿಮ್ಮೆಲ್ಲರ ಸಹಕಾರದಿಂದ ನನಗೆ ಒಂದು ಅವಕಾಶ ಸಿಕ್ಕಿದೆ ಹನೂರು ಕ್ಷೇತ್ರ ಎಂದರೆ ಭೌಗೋಳಿಕವಾಗಿ ದೊಡ್ಡ ಕ್ಷೇತ್ರ ಹಾಗಾಗಿ ಅಭಿವೃದ್ಧಿ ಪಡಿಸುವುದು ಸವಾಲಿನ ಸಂಗತಿ ನನ್ನ ಮುಂದೆ ಇದೆ ನಾನು ನನ್ನ ಕೈಲಾದ ಪ್ರಾಮಾಣಿಕ ಸೇವೆ ಸಲ್ಲಿಸುತ್ತೇನೆ.
ಹೀಗಾಗಲೇ ವಿದ್ಯಾರ್ಥಿಗಳ ಜೀವನದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಜೀವನದ ಪ್ರಮುಖ ಘಟ್ಟ ಹಾಗಾಗಿ ಮಕ್ಕಳಿಗೆ ಭರವಸೆ ತುಂಬುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.
ನಾನೂ ಪ್ರಾಮಾಣಿಕ ಸೇವೆ ಮಾಡಲು ಅಧಿಕಾರಿಗಳ ಬೆಂಬಲಬೇಕು ನಮ್ಮ ನಿಮ್ಮ ಪ್ರೀತಿ ಅಭಿವೃದ್ಧಿಯತ್ತ ಇರಲಿ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷರು ಉಪಾಧ್ಯಕ್ಷರು ಪದಾಧಿಕಾರಿಗಳು ಮತ್ತು ರಾಜ್ಯದಿಂದ ಅನೇಕ ಸರ್ಕಾರಿ ನೌಕರರು ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್