ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ವಿಜ್ಞಾನ ಶಿಕ್ಷಕರಿಗೆ ವಿಶೇಷ ಕಾರ್ಯಾಗಾರ ಶಿಬಿರ

ಬೋಧನಾ ಸಾಮಗ್ರಿಗಳಿಂದ ಪರಿಣಾಮಕಾರಿ ಕಲಿಕೆ

ಕೊಟ್ಟೂರು:ವಿಕಾಸನ ಕೇಂದ್ರ ಬೆಳಗಾವಿ,ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ,ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಪರಿಷತ್ತು,ಶಾಲಾ ಶಿಕ್ಷಣ ಇಲಾಖೆ ವಿಜಯನಗರ ಜಿಲ್ಲೆ,ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವಿಜಯನಗರ ಜಿಲ್ಲಾ ಸಮಿತಿ  ಇವರ ಸಂಯುಕ್ತ ಆಶ್ರಯದಲ್ಲಿ ಕೊಟ್ಟೂರು ಪಟ್ಟಣದ ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮೂರು ದಿನಗಳ ತರಬೇತಿ ಕಾರ್ಯಗಾರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಉಪ ಪ್ರಾಂಶುಪಾಲರಾದ ಬಸವರಾಜ್ ಇವರು  ಕಡಿಮೆ ವೆಚ್ಚದಲ್ಲಿ ಪ್ರಯೋಗಾತ್ಮಕವಾಗಿ ಕಲಿಸಿದಾಗ ಮಾತ್ರ ಕಲಿಕೆಯು ಉಲ್ಲಾಸದಾಯಕವಾಗಿರುತ್ತದೆ ಹಾಗೂ ಪ್ರಯೋಗಾತ್ಮಕ ಬೋಧನೆಯಿಂದ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ಸಂಪೂರ್ಣವಾಗಿ ಸದುಪಯೋಗಪಡಿಸಿಕೊಳ್ಳುತ್ತಾರೆ. ವಿಜ್ಞಾನವು ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕೆ ಸಾಂಪ್ರದಾಯಿಕ ಪದ್ಧತಿ ಅಥವಾ ಕೇವಲ ಬೋಧನಾ ವಿಧಾನದಿಂದ ವಿಜ್ಞಾನ ಬೋಧಿಸುವುದರಿಂದ ವಿದ್ಯಾರ್ಥಿಗಳಲ್ಲಿ ನಿರೀಕ್ಷಿತ ಮಟ್ಟದ ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯವಾಗುವುದಿಲ್ಲ ಎಂದರು.

ಬೋಧನೆ ಮತ್ತು ಕಲಿಕಾ ಪ್ರಕ್ರಿಯೆಗಳನ್ನು ಪರಿಣಾಮಕಾರಿಯಾಗಿಸಲು ವಿಶ್ವದಾದ್ಯಂತ ಶಿಕ್ಷಕರು ಹೊಸ ಬೋಧನಾ ಸಾಧನಗಳನ್ನು ಆವಿಷ್ಕರಿಸಿದ್ದಾರೆ ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಸಿದ್ದಪ್ಪ ಕರೆ ನೀಡಿದರು.

ವೈಜ್ಞಾನಿಕ ಪ್ರಕ್ರಿಯೆಯ ಪರಿಕಲ್ಪನೆಯನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳಲು ಶಿಕ್ಷಕರಿಗೆ ಈ ತರಬೇತಿ ಕಾರ್ಯಗಾರದಲ್ಲಿ ಬೋಧನಾ ಸಾಮಗ್ರಿಗಳು ಬಹಳ ಉಪಯೋಗಕ್ಕೆ ಬರುತ್ತದೆ ಎಂದು ಕರಾವಿಪ ಜಿಲ್ಲಾ ಸಮಿತಿ ಅಧ್ಯಕ್ಷ ಕೆ ರಾಮಣ್ಣ ತಿಳಿಸಿದರು.ಸಂಪನ್ಮೂಲ ವ್ಯಕ್ತಿಗಳಾದ ರಾಘವೇಂದ್ರ ಮಿಸಾಳೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆಯಲ್ಲಿ ವಿಕಾಸನ ಸಂಸ್ಥೆಯ ಅಧ್ಯಕ್ಷ ಸಂಜಯ್ ಮುದುಗುಮ್,ರವಿಪ್ರಸಾದ್ ಕುಲಕರ್ಣಿ,ಕರವೀಪ  ಕಾರ್ಯದರ್ಶಿ ಹರೀಶ್ ಗೌಡ,ಶಿವತನಯ ಇದ್ದರು. ವಿಜಯನಗರ ಜಿಲ್ಲೆಯ ಕೂಡ್ಲಿಗಿ,ಕೊಟ್ಟೂರು, ಹರಪನಹಳ್ಳಿ,ಹಗರಿಬೊಮ್ಮನಹಳ್ಳಿ,ಹಡಗಲಿ ತಾಲೂಕಿನ 60 ಜನ ಶಿಕ್ಷಕರು ಈ ಕಾರ್ಯಗಾರದಲ್ಲಿ ಭಾಗವಹಿಸಿದ್ದರು.ಮಕ್ಕಳ ವಿಜ್ಞಾನ ಸಮಾವೇಶದ ಜಿಲ್ಲಾ ಸಂಚಾಲಕರ ಕೊಟ್ರು ಸ್ವಾಮಿ ಎಸ್ ಎಂ ನಿರೂಪಿಸಿದರು.ಪ್ರಾರ್ಥನೆಯನ್ನು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ನಿರ್ವಹಿಸಿದರು.
ಕಾರ್ಯಕ್ರಮದ ಉದ್ಘಾಟನೆ ನಂತರ ಕೂಡ್ಲಿಗಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮಾಭರಣಂ ವೀಕ್ಷಿಸಿ ಮೂರು ದಿನಗಳ ಈ ತರಬೇತಿಯನ್ನು ಉತ್ತಮ ರೀತಿಯಲ್ಲಿ ಪಡೆದುಕೊಂಡು ತಮ್ಮ ಶಾಲೆಯ ಮಕ್ಕಳಿಗೆ ತಲುಪುವಂತಾಗಲು ಕಾರ್ಯಗಾರವು ಯಶಸ್ವಿ ಆಗಲಿ ಎಂದು ಶುಭ ಹಾರೈಸಿದರು.

ವರದಿ:ವೈ.ಮಹೇಶ್ ಕುಮಾರ್,ಕೊಟ್ಟೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ