ಕಲಬುರಗಿ:ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರ ವಿರುದ್ಧ ಬಿಜೆಪಿ ನಾಯಕರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಅವರ ಸುಳ್ಳು ಆರೋಪಗಳು ಸತ್ಯಕ್ಕೆ ದೂರವಾದ ವಿಚಾರ ಎಂದು ತಾಜ ಸುಲ್ತಾನಪುರ ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷ ಸುನೀಲ ಮದನಕರ್ ಅವರು ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಬಿಜೆಪಿ ಮುಖಂಡ ದತ್ತಾತ್ರೇಯ ಪಾಟೀಲ ರೇವೂರ ಅವರು ದಕ್ಷಿಣ ಮತಕ್ಷೇತ್ರದ ಶಾಸಕರ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ.
ದತ್ತಾತ್ರೇಯ ಪಾಟೀಲ ಅವರು ನೀಡಿರುವ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.
ಅವರ ಮೇಲೆ ಈ ರೀತಿ ಇಲ್ಲ-ಸಲ್ಲದ ಆರೋಪಗಳನ್ನು ಮುಂದುವರಿಸಿದರೆ ಇನ್ನು ಮುಂದೆ ಕಾನೂನು ಬಲ್ಲವನಾಗಿ ಸುಮ್ಮನಿರಲು ಸಾಧ್ಯವಿಲ್ಲ.ಸತ್ಯಕ್ಕೆ ದೂರವಾದ ಆರೋಪಗಳಿಗೆ ಕಾನೂನು ಪ್ರಕಾರ ಕಾನೂನು ಕ್ರಮ ಜರುಗಿಸಬೇಕು ಮರ್ಯಾದೆಗೆ ಹೆದರುತ್ತೇನೆಯೇ ಹೊರತು ಹುರುಳಿಲ್ಲದ ಆರೋಪ, ಬೆದರಿಕೆಗಳಿಗೆ ಅವರು ಬಗ್ಗುವುದಿಲ್ಲ.ಸುಳ್ಳು ಆರೋಪ ಮಾಡಿದವರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
ಸಿದ್ದರಾಮಯ್ಯ ಸರಕಾರ ಒಳ್ಳೆಯ ಆಡಳಿತ ನೀಡುತ್ತಿದ್ದರು ಬಿಜೆಪಿ ನಾಯಕರು ಗೊತ್ತು ಗುರಿಯಿಲ್ಲದೆ ಸತ್ಯಕ್ಕೆ ದೂರವಾದ ವಿಚಾರ ಪ್ರಸ್ತಾಪಿಸಿ ಜನರ ದಾರಿ ತಪ್ಪಿಸುತ್ತಿದ್ದಾರೆ ತನ್ಮೂಲಕ ಸ್ವತಃ ದಾರಿ ತಪ್ಪಿದ ಮಕ್ಕಳಾಗಿದ್ದಾರೆ ಎಂದು ಅವರು ಆರೋಪಿಸಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.