ಕಲಬುರಗಿ:ಇಲ್ಲಿನ ಏರ್ ಪೋರ್ಟ್ ರಸ್ತೆಯಲ್ಲಿರುವ ಸ್ವಾಮಿನಾರಾಯಣ ಗುರುಕುಲ ಅಂತರಾಷ್ಟ್ರೀಯ ವಿದ್ಯಾಸಂಸ್ಥೆ ಆವರಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಪರಮಪೂಜ್ಯ ನಯನ ಪ್ರಿಯದಾಸ ಸ್ವಾಮೀಜಿ ವಹಿಸಿಕೊಂಡಿದ್ದರು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಲ್ಯಾಣಕುಮಾರ ಶೀಲವಂತ ಸಂಘ ಸಂಸ್ಥೆ ಪ್ರತಿನಿಧಿಗಳು ಕನ್ನಡ ಸಾಹಿತ್ಯ ಪರಿಷತ್ತು ಕಲಬುರ್ಗಿಯವರು ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಣ ಮತ್ತು ಶಿಕ್ಷಕರ ಪಾತ್ರ,ಪಾಲಕರ ಮಹತ್ವ ಹಾಗೂ ಶಾಲೆಯ ಶಿಸ್ತು,ಸಂಸ್ಕಾರ,ವಿದ್ಯಾ,ಸದ್ವಿದ್ಯಾ,ಬ್ರಹ್ಮವಿದ್ಯಾ,ತ್ರಿವಳಿ ಶಿಕ್ಷಣ ಮಾದರಿಯನ್ನು ನೀಡುವ ಬಗ್ಗೆ ಮಾತನಾಡಿದರು.ಸಮಾರಂಭದಲ್ಲಿ ಪ್ರಾಂಶುಪಾಲರು ಶಾಲೆಯ ವಾರ್ಷಿಕ ವರದಿ ವಾಚನ ಹೇಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರುಗಳು ಭಾಗವಹಿಸಿ ಪ್ರಾಥಮಿಕ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದರು.
ಕಾರ್ಯಕ್ರಮದ ಜೊತೆಗೆ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಜೀ ಸ್ಟಾರ್ ಪ್ರಶಸ್ತಿ ಪತ್ರವನ್ನು ನೀಡಲಾಯಿತು.ಕಾರ್ಯಕ್ರಮದ ನಿರೂಪಣೆಯನ್ನು ಶಿವಾಜಿ ಕುಂಬಾರ ಮಾಡಿದರೆ ಜಗದೀಶ ಕೆ ವಂದಿಸಿದರು.ಕಾರ್ಯಕ್ರಮದಲ್ಲಿ ಪಾಲಕರು,ಸಂಸ್ಥೆಯ ಸಿಬ್ಬಂದಿ ವರ್ಗ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ವರದಿ:ಅಪ್ಪಾರಾಯ ಬಡಿಗೇರ