ಕೊಪ್ಪಳ ಫೆಬ್ರವರಿ: ಕರ್ನಾಟಕ ಲೋಕಾಯುಕ್ತ ಕೊಪ್ಪಳ ಕಚೇರಿಯಿಂದ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳ ಸಭೆಯನ್ನು ಫೆಬ್ರವರಿ 16ರಂದು ಬೆಳಿಗ್ಗೆ 11 ಗಂಟೆಗೆ ನಗರದ ತಾಲ್ಲೂಕ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಗೌರವಾನ್ವಿತ ಲೋಕಾಯುಕ್ತ,ಬೆಂಗಳೂರು ಹಾಗೂ ಅಪರ ಪೊಲೀಸ್ ಮಹಾನಿರ್ದೇಶಕರು,ಕರ್ನಾಟಕ ಲೋಕಾಯುಕ್ತ ಬೆಂಗಳೂರು ರವರ ಆದೇಶದ ಮೇರೆಗೆ ಕೊಪ್ಪಳ ತಾಲ್ಲೂಕಿನಲ್ಲಿ ಸಾರ್ವಜನಿಕರಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿಗಳಿಂದ ಆಗಬೇಕಾದ ಕೆಲಸಗಳಲ್ಲಿ ವಿಳಂಬವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯಯುತವಾಗಿ ಮಾಡಿ ಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುತ್ತಿದ್ದರೆ,ಲಂಚ ಕೇಳುವುದು ಇತ್ಯಾದಿ ದುರಾಡಳಿತದಲ್ಲಿ ತೊಡಗಿದ್ದರೆ,ಫೆ. 16 ರಂದು ಕೊಪ್ಪಳದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕರಿಸುವ ಕಾರ್ಯಕ್ರಮವನ್ನು ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳ ಸಭೆ ನಡೆಸುವುದನ್ನು ತೀರ್ಮಾನಿಸಲಾಗಿದೆ.
ಲೋಕಾಯುಕ್ತ ಅಧಿಕಾರಿಗಳು ಅಂದು ಎಲ್ಲಾ ಇಲಾಖೆಯ ತಾಲ್ಲೂಕ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು,ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ: 1 & 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದೆ. ಸಾರ್ವಜನಿಕರು ಈ ಸಭೆಯ ಉಪಯೋಗ ಪಡೆದುಕೊಳ್ಳಲು ಈ ಮೂಲಕ ತಿಳಿಸಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊ ಸಂ: 9364062699,9364062700,9364062701 ಮತ್ತು 9364062700 ಗಳನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಕೊಪ್ಪಳ ಪೊಲೀಸ್ ಉಪ-ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.