ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಛತ್ರಪತಿ ಶಿವಾಜಿ ಮಹಾರಾಜರು ರಾಷ್ಟ್ರಪ್ರೇಮಿಗಳಾಗಿದ್ದು,ಅವರ ತತ್ತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ:ಮರತೂರಕರ್

ಕಮಲಾಪೂರ:ಜಯಂತ್ಯೋತ್ಸವಗಳು ಎಲ್ಲಾ ವರ್ಗದ ಜನರಿಗೆ ಸೀಮಿತವಾಗಿರಬೇಕು ಎಂದು ಮಹಾಗಾಂವ ಬಿಜೆಪಿ‌ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಹೇಳಿದರು.
ತಾಲೂಕಿನ ಮಹಾಗಾಂವ ಕ್ರಾಸ್ ನಲ್ಲಿ ಇಂದು ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 394 ನೇ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಮಹಾನ್ ವ್ಯಕ್ತಿಗಳ ಜಯಂತಿ,ಸಭೆ ಸಮಾರಂಭಗಳನ್ನು ಪ್ರತಿಯೊಬ್ಬರೂ ಆಚರಣೆ ಮಾಡಬೇಕು.ಛತ್ರಪತಿ ಶಿವಾಜಿ ಮಹಾರಾಜರು ರಾಷ್ಟ್ರಪ್ರೇಮಿಗಳಾಗಿದ್ದು,ಅವರ ತತ್ತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ರಾಷ್ಟ್ರವನ್ನು ಪರಕೀಯರ ಆಡಳಿತದಿಂದ ಮುಕ್ತಗೊಳಿಸಿ ರಕ್ಷಿಸುವಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅಪಾರವಾಗಿದೆ.ಇಂತಹ ಮಹಾನ್‌ ವ್ಯಕ್ತಿಯು ಯಾವುದೇ ಒಂದು ಜನಾಂಗಕ್ಕೆ ಮಾತ್ರ ಸೀಮಿತಗೊಳ್ಳದೆ ರಾಷ್ಟ್ರನಾಯಕರಾಗಿ ಧರ್ಮ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿ ತ್ಯಾಗ, ಬಲಿದಾನದ ಪರಿಣಾಮವಾಗಿ ಇಂದು ಸಮಾಜದಲ್ಲಿ ಜನರು ಶಾಂತಿ,ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗಿದೆ ಎಂದರು.
ರಾಷ್ಟ್ರದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಶಿವಾಜಿಯವರ ಶ್ರಮ ಅನಿಸ್ಮರಣೀಯವಾದುದಾಗಿದೆ. ಇಂತಹ ಮಹಾನ್‌ ವ್ಯಕ್ತಿಯ ಆದರ್ಶಗಳನ್ನು ಅಳವಡಿಸಿಕೊಂಡಲ್ಲಿ ಮಾತ್ರ ಗೌರವ ಸಲ್ಲಿಸಿದಂತಾಗಲಿದೆ ಎಂದರು.
ಈ‌ ಸಂದರ್ಭದಲ್ಲಿ ಗಜಾನಂದ ಜಾಧವ,ದಿಲೀಪ ಚವ್ಹಾಣ,ಸಂದೀಪ ಬಿರಾದಾರ,ಕಾಶೀನಾಥ ಸಾವಂತ, ಸಂಜುಕುಮಾರ ಚವ್ಹಾಣ,ಆನಂದ ಚವ್ಹಾಣ,ತುಳಸಿರಾಮ ಜಾಧವ,ಗೋವಿಂದ ಬೋಸ್ಲೆ,ಶ್ರೀಮಂತರಾವ ಜಗದಾಳೆ,ವಿಶ್ವನಾಥ ಜಗತಾಪೆ,ಶಿವು ಚಕಳಾಪುರ,ಲಕ್ಷ್ಮಣ ಸೂರ್ಯವಂಶಿ ಸೇರಿದಂತೆ ಇತರರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ