ಶಿವಮೊಗ್ಗ:ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆ ಹಾಗೂ ಭದ್ರಾವತಿ ಅಗ್ನಿಶಾಮಕ ಠಾಣೆ ವತಿಯಿಂದ ಅಗ್ನಿ ಅವಘಡಗಳ ಅರಿವು ಮತ್ತು ಅಗ್ನಿ ಅನಾಹುತ ತಡೆಗಟ್ಟುವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಬಿ.ಆರ್.ಪಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಅಗ್ನಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಉಪನ್ಯಾಸ ನೀಡಿ,ಬಹುಮಹಡಿ ಕಟ್ಟಡಗಳಲ್ಲಿ ನಡೆಯುವ ಅಗ್ನಿ ಅನಾಹುತಗಳ ಬಗ್ಗೆ ಅಣುಕು ಪ್ರದರ್ಶನದ ಮೂಲಕ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆ ವತಿಯಿಂದ ಅಗ್ನಿ ಶಾಮಕ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಿ ಅಭಿನಂದಿಸಲಾಯಿತು.ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಸಿ.ಹೆಚ್.ಹುಲಿಯಪ್ಪ ಸೇರಿದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ವಸತಿ ಶಾಲೆಯ ಶಿಕ್ಷಕರು,ವಿದ್ಯಾರ್ಥಿಗಳು ಹಾಜರಿದ್ದರು.
ವರದಿ:ಕೆ ಆರ್ ಶಂಕರ್ ಭದ್ರಾವತಿ