ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಇಂಡಿ ತಾಲೂಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಪದಾಧಿಕಾರಿಗಳ ಆಯ್ಕೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಪದಾಧಿಕಾರಿಗಳ ಆಯ್ಕೆ
ಕಾರ್ಯಕ್ರಮವು ಇತ್ತೀಚಿಗೆ ನಗರದ ಪ್ರವಾಸಿ ಮಂದಿರದಲ್ಲಿ ನಡೆಯಿತು.ಇಂಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ತಾಲೂಕು ಅಧ್ಯಕ್ಷರಾಗಿ ಸತೀಶ್ ವಾಲಿಕಾರ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮಣ್ ಲೋಕುರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಸ್ ಎಂ ಬಿರಾದಾರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಹಾಗೂ ಸಂಘಟನಾ ಕಾರ್ಯದರ್ಶಿ ಸಂಜೀವ ಹಾಗೂ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ಸಂಜು ನಾಯ್ಕೊಡಿ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಕಾರ್ಯಕಾರಿಣಿ ಸದಸ್ಯರನ್ನಾಗಿ ಪವನ್ ಕೊಡವನ್ನ ಅವರನ್ನು ಆಯ್ಕೆ ಮಾಡಲಾಯಿತು ಇದೇ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಎಲ್ಲರಿಗೂ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಯೂಸುಫ್ ನೆವಾರ ಕಾ.ನಿ.ಪ ಧ್ವನಿ ಜಿಲ್ಲಾ ಅಧ್ಯಕ್ಷರು,ಹಸನ ಡೊಂಗರಿ ಉಪಾಧ್ಯಕ್ಷರು,ವಿನಾಯಕ ಸಂಡೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು,ಸರದಾರ ಪತ್ತಾರ ಜಿಲ್ಲಾ ಕಾಯ೯ಕಾರಿಣಿ ಸಮಿತಿ ಸದಸ್ಯರು,ಲಾಲಸಾಬ ಜಮಾದಾರ ಜಿಲ್ಲಾ ಕಾನಿಪ ಧ್ವನಿ ಕಾಯ೯ಕಾರಿಣಿ ಸದಸ್ಯರು ಉಪಸ್ಥಿತರಿದ್ದರು.

ವರದಿ-ಮನೋಜ ನಿಂಬಾಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ