ಹನೂರು:ಪಟ್ಟಣ ಪಂಚಾಯಿತಿ ಕಾರ್ಯಾಲಯ ಹನೂರು, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಚಾಮರಾಜನಗರ ಜಿಲ್ಲೆ,(ಡಿಎವೈ -nulm) ಯೋಜನೆ,ಮಡಿಲು ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ.)ಮೈಸೂರು ಇವರ ಸಹಭಾಗಿತ್ವದಲ್ಲಿ ಬೀದಿ ಬದಿ ವ್ಯಾಪಾರಿಗಳ ಜಾಗೃತಿಗಾಗಿ ಬೀದಿ ನಾಟಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮಕ್ಕೆ ಪ.ಪಂ.ಸದಸ್ಯ ಮಹೇಶ್ ಚಾಲನೆ ನೀಡಿ ಮಾತನಾಡಿ,ಬೀದಿ ಬದಿ ವ್ಯಾಪಾರಿಗಳ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ರಾಜ್ಯದಲ್ಲಿ ಸ್ವ-ನಿಧಿ ಸೇ ಸಮೃದ್ಧಿ ಯೋಜನೆ,ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ವಿಶೇಷ ಕಿರು ಸಾಲ ಸೌಲಭ್ಯ ಯೋಜನೆಯನ್ನು ಜಾರಿಗೆ ತರಲಾಗಿದೆ ಈ ಅನುಕೂಲವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಪಟ್ಟಣದ ಖಾಸಗಿ ಬಸ್ ನಿಲ್ದಾಣ,ಬಂಡಳ್ಳಿ ರಸ್ತೆ,ಡಾ.ಅಂಬೇಡ್ಕರ್ ವೃತ್ತ,ಮಲೆ ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯ ಪೆಟ್ರೋಲ್ ಬಂಕ್ ವೃತ್ತದಲ್ಲಿ ಜಾಗೃತಿ ಕಲಾತಂಡದವರು ನಾಟಕದ ಮೂಲಕ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ,ಪ್ರಧಾನ ಮಂತ್ರಿ ಜನ್ ಧನ್ ಯೋಜನೆ,ಪ್ರಧಾನಮಂತ್ರಿ ಜನನಿ ಸುರಕ್ಷಾ ಯೋಜನೆ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆ, ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ, ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ,ಬಿಒಸಿಡಬ್ಲ್ಯೂ ಅಡಿಯಲ್ಲಿ ನೋಂದಣಿ ಲೇಬರ್ ಕಾರ್ಡ್ ಹಣಕಾಸಿನ ಸಹಾಯ ಮತ್ತು ಇತರೆ ಸೌಲಭ್ಯಗಳ ಬಗ್ಗೆ ಸಾದರಪಡಿಸಿದರು.
ಈ ಸಂದರ್ಭದಲ್ಲಿ ಪ.ಪಂ.ಸದಸ್ಯ ಮಹೇಶ್ ನಾಯಕ್, ಮುಖಂಡರಾದ ಸತೀಶ್,ಮೋಹನ್ ಕುಮಾರ್, ವ್ಯವಸ್ಥಾಪಕ ಮಹಾದೇಶ್,ಕೌಶಲ್ಯ ಇಲಾಖೆಯ ಅನ್ಸರ್ ಖಾನ್,ಸಿ.ಆರ್.ಪಿ.ಜಯಶೀಲ,ಪಟ್ಟಣ ಪಂಚಾಯಿತಿ ಮದನ್,ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್