ಬೀದರ್:ಪ್ರಾಧ್ಯಾಪಕ ಸಂಗಪ್ಪ ತೌಡಿ ಅವರ ಕನ್ನಡಕ್ಕೆ ಅನುವಾದಗೊಂಡ “ಮರಾಠಿ ನಾಟಕಗಳ ಸಾಮಾಜಿಕ ಆಯಾಮಗಳು” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಏಳನೇ ಘಟಿಕೋತ್ಸವದಲ್ಲಿ ಪಿಎಚ್ ಡಿ ಪದವಿ ಪ್ರದಾನ ಮಾಡಿದೆ.ಪ್ರೊ.ವಿಕ್ರಮ ವಿಸಾಜಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಈ ಸಂಶೋಧನಾ ಪ್ರಬಂಧಕ್ಕೆ ಪಿಎಚ್ ಡಿ ಪದವಿ ಲಭಿಸಿದೆ. ಕರ್ನಾಟಕ ಲೋಕಾಯುಕ್ತ ಬಿ.ಎಸ್.ಪಾಟೀಲ್ ಅವರು ಪದವಿ ಪ್ರಮಾಣ ಪತ್ರ ವಿತರಿಸಿದರು. ತೌಡಿಯವರು ಸದ್ಯ ಕರ್ನಾಟಕ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
