ಹನೂರು:ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನವನ್ನು ರಚಿಸಿ ಸರ್ವರಿಗೂ ಸಮಪಾಲು ಸಮಬಾಳ್ವೆ ಅವಕಾಶವನ್ನು ಕಲ್ಪಿಸಿದ ಮಹಾ ಮಾನವತಾವಾದಿ ಡಾ.ಅಂಬೇಡ್ಕರ್ ಅವರ ಹೆಸರಿನಲ್ಲಿ ನಾಮ ಫಲಕ ಉದ್ಘಾಟನೆ ಮಾಡುತ್ತಿರುವ ಪುಣ್ಯದ ಕೆಲಸ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.
ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದ ಡಾ.ಅಂಬೇಡ್ಕರ್ ವೃತ್ತದಲ್ಲಿ ಪ್ರಜಾಪ್ರಭುತ್ವ ಪಿತಾಮಹ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನಾಮ ಫಲಕವನ್ನು ಲೋಕಾರ್ಪಣೆಗೊಳಿಸಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿ ಡಾ.ಅಂಬೇಡ್ಕರ್ ಅವರ ಆಶಯ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸುವುದೇ ಆಗದೇ ಈ ನಿಟ್ಟಿನಲ್ಲಿ ನಾನು ಕೂಡಾ ಡಾ.ಅಂಬೇಡ್ಕರ್ ಅವರ ಆಶಯಗಳೊಂದಿಗೆ ಕೆಲಸ ನಿರ್ವಹಿಸುತ್ತೇನೆ.ಯುವ ಪೀಳಿಗೆಗೆ ಡಾ.ಅಂಬೇಡ್ಕರ್ ಅವರ ತತ್ವ ಆದರ್ಶಗಳು ಅನುಕರಣಿಯ.ಡಾ.ಅಂಬೇಡ್ಕರ್ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಜೇತವನದ ಮನೋರಂಖಿತ ಬಂತೇಜಿ ಸ್ವಾಮೀಜಿ ಗ್ರಾ.ಪಂ.ಅಧ್ಯಕ್ಷೆ ಮಂಜುಳ, ಉಪಾಧ್ಯಕ್ಷೆ ಚೈತ್ರಾ,ಸದಸ್ಯರುಗಳು ಸೇರಿದಂತೆ ವಿವಿಧ ಸಮುದಾಯದ ಮುಖಂಡರುಗಳು, ಯಜಮಾನರುಗಳು,ಜೈಭೀಮ್ ವಿದ್ಯಾರ್ಥಿ ಬಳಗ ಪದಾಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್