ಕೊಪ್ಪಳ:
ಫೆಬ್ರವರಿ-27 ರಂದು ಕರ್ನಾಟಕದ ವಿಧಾನಸೌಧದಲ್ಲಿ ನಡೆದ ರಾಜ್ಯ ಸಭೆಯ ಚುನಾವಣೆಯ ಫಲಿತಾಂಶದ ನಂತರ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಅಭ್ಯರ್ಥಿಯಾದ ನಾಸೀರ ಹುಸೇನ್ರವರ ಪರವಾಗಿ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗುವ ಮೂಲಕ ದೇಶದ್ರೋಹವೆಸಗಿರುವುದು ತೀವ್ರ ಖಂಡನೀಯ ಎಂದು ಯಮನೂರ ನಾಯಕ ಬುನ್ನಟ್ಟಿ ಗ್ರಾಮ ಮತ್ತು ನಗರಸಬಲೀಕರಣ ಸಂಘದಿಂದ ಆಕ್ರೋಷ ವ್ಯಕ್ತಪಡಿಸಿದರು.
ಕರ್ನಾಟಕ ವಿಧಾನಸೌಧದಲ್ಲಿ ನಾಸೀರ್ ಹುಸೇನ್ ರವರ ಗೆಲುವಿನ ಸಂದರ್ಭದಲ್ಲಿ ಭಾರತದ ಕಟ್ಟಾ ವೈರಿ ರಾಷ್ಟ್ರವಾದ ಪಾಕಿಸ್ತಾನದ ಪರವಾಗಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ದೇಶದ್ರೋಹದ ಮನಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ. ಕೂಡಲೇ ಸರ್ಕಾರ ಘೋಷಣೆ ಕೂಗಿದವರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸುವ ಮೂಲಕ ದೇಶದಿಂದ ಗಡಿಪಾರು ಮಾಡಬೇಕೆಂದು ನಮ್ಮ ಗ್ರಾಮ ಮತ್ತು ನಗರ ಸಬಲೀಕರಣ ಸಂಘ ಸರ್ಕಾರಕ್ಕೆ ಆಗ್ರಹಿಸುತ್ತದೆ ಎಂದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.