ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಗುವಿಗೆ ಪೋಲಿಯೋ ಹನಿ ನೀಡುವ ಮೂಲಕ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಆರೋಗ್ಯ ಇಲಾಖೆ ರಾಜ್ಯದ್ಯಂತ ಭಾನುವಾರ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಷಕರು ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ಮುಕ್ತಗೊಳಿಸಲು ಪೋಲಿಯೋ ಸಮಸ್ಯೆಯಿದ್ದ ಜಗತ್ತಿನ ವಿವಿಧಡೆ ಮಕ್ಕಳನ್ನು ಬಾಧಿಸುತ್ತಿದೆ ಹೀಗಾಗಿ ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವಂತೆ ತಮ್ಮ ನೆರೆಹೊರೆಯ ಮಕ್ಕಳಿರುವ ಪೋಷಕರಿಗೆ ತಿಳಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಎ.ಈ ರಘು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಿರಣ್ ಕುಮಾರ್ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕರಾದ ಮಂಜೇಶ್ ಗೌಡ ಕುಮಾರ್,ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್




















