ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪೋಲಿಯೋ ಲಸಿಕಾ ಹನಿ ಹಾಕಿಸಿ ಅಂಗವೈಕಲ್ಯತೆ ತಡೆಯೋಣ

ಗದಗ ತಾಲ್ಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ರಾಷ್ಟ್ರೀಯ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಇಂದು ಲಸಿಕಾ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್ ಬಾಬರಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿ ಅವರು ಭಾರತವು ಪೋಲಿಯೋ ಮುಕ್ತ ದೇಶವಾಗಿದೆ ಆದರೆ ನೆರೆ ಹೊರೆಯ ದೇಶಗಳಲ್ಲಿ ಇನ್ನೂ ಪೋಲಿಯೋ ಇದೆ ಅದು ನಮ್ಮಲ್ಲಿಯೂ ಮತ್ತೆ ಮರುಕಳಿಸುಬಹು ಎಂಬ ಉದ್ದೇಶದಿಂದ ಪೋಲಿಯೋ ಲಸಿಕೆಯನ್ನು ಹಾಕಲಾಗುತ್ತದೆ.
2011 ರಿಂದ ದೇಶದಲ್ಲಿ ಯಾವುದೇ ಒಂದು ಪೋಲಿಯೋ ಪ್ರಕರಣ ಕಂಡು ಬಂದಿಲ್ಲ ಹೀಗಾಗಿ ಭಾರತ ದೇಶವು ಪೋಲಿಯೋ ಮುಕ್ತವಾಗಿದೆ ಎಂದು ಹೇಳಿದರು.
ಆದ್ದರಿಂದ ನಿಮ್ಮ ಮಗುವಿನ ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಲು 5 ವರ್ಷದೂಳಗಿನ ನಿಮ್ಮ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಿ ಮುಂದೆ ಬರಬಹುದಾದ ಅಂಗವಿಕಲತೆಯನ್ನು ತಡೆಯಾಣ ಪೋಲಿಯೋ ವಿರುದ್ಧ ಜಯ ಸಾಧಿಸುವದನ್ನು ಮುಂದೆವರೆಸೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಹಾಯಕ ವೈದ್ಯ ಮುತ್ತಣ್ಣ ಹಟ್ಟಿಮನಿ ಮಾತನಾಡಿ ಅಂಗನವಾಡಿ ನಮ್ಮ ಗ್ರಾಮದಲ್ಲಿ ಮೂರು ಅಂಗನವಾಡಿ ಕೇಂದ್ರಗಳಿವೆ ಈ ಮೂರು ಕೇಂದ್ರಗಳಲ್ಲಿ ಸುಮಾರು 385 ಮಕ್ಕಳ ಇದು ಈ ಎಲ್ಲಾ ಮಕ್ಕಳಿಗೂ ಪೋಲಿಯೋ ಹನಿ ಹಾಕುತ್ತೇವೆ ಈ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಮೂರು ದಿನಗಳ ಕಾಲ ನಡೆಯುತ್ತದೆ ಯಾವ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ಬಂದಿರುವುದಿಲ್ಲ ಅವರಿಗೆ ಮನೆ ಮನೆಗೆ ತೆರಳಿ ಪೋಲಿಯೋ ಹನಿ ಹಾಕುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಹಾಯಕ ವೈದ್ಯರಾದ ಗಂಗಮ್ಮ ಕುಂಬಾರ,ಸುಶ್ಮಿತಾ ಪೀಟರ್ ಹಾಗೂ ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮಿ ವ್ಹಿ ಇದ್ಲಿ,ಶಂಕ್ರಮ್ಮ ಕೋತಬಾಳ, ವಿದ್ಯಾ ಇದ್ಲಿ,ಆಶಾ ಕಾರ್ಯಕರ್ತೆಯರಾದ ವಿಜಯಲಕ್ಷ್ಮೀ ಉಂಡಿ,ಶಾರವ್ವ ಗೋಂದಿ ಹಾಗೂ ಮಕ್ಕಳು ಪಾಲ್ಗೊಂಡಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!