ಕಲಬುರಗಿ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವೆಡೆ ಶೀಘ್ರವೇ ಸ್ಪಂದಿಸಿ, ನೀರು ಸರಬರಾಜಿಗೆ ಕ್ರಮ ಕೈಗೊಳ್ಳಬೇಕು ಎಂದು ಕರವೇ(ಪ್ರವೀಣ ಶೆಟ್ಟಿ ಬಣ) ದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಷೇಕ ಬಾಲಾಜಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೇಸಿಗೆ ಶುರುವಾಗುವ ಮುನ್ನವೇ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಕುಡಿಯುವ ನೀರಿಗೆ ಸ್ಪಂದಿಸಬೇಕು ಎಂದು ಅವರು ಮನವಿ ಮಾಡಿದರು.
ಜಿಲ್ಲೆಯಾದ್ಯಂತ ಯಾವ್ಯಾವ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಇದೆ ಎಂಬುದನ್ನು ಸರ್ವೆ ಮೂಲಕ ಪತ್ತೆ ಹಚ್ಚಿ, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು ಎಂದರು.ಕೆಲವೆಡೆ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ ಹಲವೆಡೆ ವಿದ್ಯುತ್ ಇಲ್ಲದೇ ಇರುವುದು ನೀರಿನ ಅಭಾವಕ್ಕೆ ಕಾರಣವಾಗಿದೆ ಮತ್ತು ಇನ್ನು ಕೆಲವೆಡೆ ಅಧಿಕಾರಿಗಳ ನಿರ್ಲಕ್ಷವೂ ಇದೆ ಎಂದಿದ್ದಾರೆ.
ನಿರ್ಲಕ್ಷ ವಹಿಸುತ್ತಿರುವ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ತಕ್ಷಣವೇ ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಡಿಸಿಗೆ ಮನವಿ ಮಾಡಿಕೊಂಡರು. ನಗರದ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ನೀರಿನ ಸಮಸ್ಯೆ ಇರುವುದು ಬೆಳಕಿಗೆ ಬಂದಿದೆ. ನೀರಿನ ಸಮಸ್ಯೆ ಕುರಿತಂತೆ ದೂರು ನೀಡಲು ಕೇಂದ್ರಗಳನ್ನು ಸ್ಥಾಪಿಸಬೇಕು,ದೂರು ಬಂದ ತಕ್ಷಣ ಅಧಿಕಾರಿಗಳು ಆ ಪ್ರದೇಶಕ್ಕೆ ಭೇಟಿ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಕೂಡಲೇ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆಯೋ ಆ ಕಡೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
